ಲಾರ್ಡ್ಸ್(ಇಂಗ್ಲೆಂಡ್): ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಭಾರತ - ಇಂಗ್ಲೆಂಡ್ ನಡುವೆ ಎರಡನೇ ಏಕದಿನ ಪಂದ್ಯ ನಡೆಯುತ್ತಿದ್ದು, ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ 246 ರನ್ಗಳಿಕೆ ಮಾಡಿದೆ. ಈ ಮೂಲಕ ಭಾರತದ ಗೆಲುವಿಗೆ 247 ರನ್ ಟಾರ್ಗೆಟ್ ನೀಡಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದರೆ ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿ ಕೈವಶ ಮಾಡಿಕೊಳ್ಳಲಿದೆ.
ಆರಂಭಿಕರಾಗಿ ಕಣಕ್ಕಿಳಿದ ಜೇಸನ್ ರಾಯ್ - ಬೈರ್ಸ್ಟೋ 41ರನ್ಗಳ ಜೊತೆಯಾಟವಾಡಿತು. ಈ ವೇಳೆ 23ರನ್ಗಳಿಸಿದ್ದ ರಾಯ್ ಹಾರ್ದಿಕ್ ಓವರ್ನಲ್ಲಿ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ 38 ರನ್ಗಳಿಕೆ ಮಾಡಿದ್ದ ಬೈರ್ಸ್ಟೋ ಕೂಡ ಚಹಲ್ ಓವರ್ನಲ್ಲಿ ಔಟಾದರು.
ಮಧ್ಯಮ ಕ್ರಮಾಂಕದಲ್ಲಿ ಕುಸಿತ: ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಜೋ ರೂಟ್(11), ಸ್ಟೋಕ್ಸ್(21) ಹಾಗೂ ಬಟ್ಲರ್(4) ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ಹೀಗಾಗಿ ತಂಡ 102 ರನ್ಗಳಿಕೆ ಮಾಡುವಷ್ಟರಲ್ಲಿ ಪ್ರಮುಖ 5 ವಿಕೆಟ್ ಕಳೆದುಕೊಂಡಿತು.