ಸಿಡ್ನಿ:ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಸೆಮಿಫೈನಲ್ಗೆ ಎಂಟ್ರಿ ಕೊಡಲು ಇಂಗ್ಲೆಂಡ್ಗೆ ಈ ಪಂದ್ಯ ನಿರ್ಣಾಯಕವಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಇಂಗ್ಲೆಂಡ್ ಮೊದಲ ಗುಂಪಿನಲ್ಲಿ ಐದು ಅಂಕಗಳನ್ನು ಪಡೆದು 3ನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದರೆ ಏಳು ಅಂಕಗಳನ್ನು ಪಡೆದು ನಾಲ್ಕರಘಟ್ಟವನ್ನು ಪ್ರವೇಶಿಸಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಕೈಚೆಲ್ಲಿದರೆ ಆಸ್ಟ್ರೇಲಿಯಾ ತಂಡಕ್ಕೆ ಸೆಮಿಫೈನಲ್ ಹಾದಿ ಸುಗಮವಾಗಲಿದೆ.
ಪಿಚ್ ವರದಿ:ಈ ಕ್ರಿಕೆಟ್ ಮೈದಾನದ ಪಿಚ್ ಅತ್ಯಂತ ಸಮತಟ್ಟಾದ ಟ್ರ್ಯಾಕ್ ಆಗಿದ್ದು, ಬ್ಯಾಟಿಂಗ್ಗೆ ಹೆಚ್ಚು ಅನುಕೂಲವಾಗಲಿದೆ. ಹೀಗಾಗಿ ಪಂದ್ಯದಲ್ಲಿ ಹೆಚ್ಚು ರನ್ ಹರಿದು ಬರುವ ಸಾಧ್ಯತೆ ಇದೆ. ಈ ಮೈದಾನವು ಬೌಲರ್ಗಳಿಗೆ ಅದರಲ್ಲೂ ವೇಗಿಗಳಿಗೆ ತಲೆನೋವಾಗಿದೆ.