ಮ್ಯಾಂಚೆಸ್ಟರ್:ಓಲ್ಡ್ ಟ್ರಾಫೋರ್ಡ್ನಲ್ಲಿ ನಡೆದ3ನೇ ಟಿ-20 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ ಮೂರು ವಿಕೆಟ್ಗಳ ಗೆಲುವು ಸಾಧಿಸಿದೆ. 2-1 ಅಂತರದಲ್ಲಿ ಇಂಗ್ಲೆಂಡ್ ಜಯ ಸಾಧಿಸಲು ಲೆಗ್ ಸ್ಪಿನ್ನರ್ ಆದಿಲ್ ರಶೀದ್ (35 ರನ್ಗೆ 4 ವಿಕೆಟ್) ಉತ್ತಮ ಪ್ರದರ್ಶನವೂ ಕಾರಣವಾಗಿದ್ದು, ವೃತ್ತಿ ಜೀವನದ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿತು. ಇನ್ನು ಪಾಕಿಸ್ತಾನ 20 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಗೆಲುವಿನ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 19.4 ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ 155 ರನ್ ಬಾರಿಸಿ ಗೆಲುವು ಸಾಧಿಸಿತು. ಇನ್ನು ಇಂಗ್ಲೆಂಡ್ ತಂಡದ ಲೆಗ್-ಸ್ಪಿನ್ನರ್ ರಶೀದ್ 35 ರನ್ಗೆ 4 ವಿಕೆಟ್ಗಳನ್ನು ಪಡೆದುಕೊಂಡು ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.