ಚೆನ್ನೈ:ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನ ಟೀಂ ಇಂಡಿಯಾವು ಆಂಗ್ಲ ಪಡೆ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 134 ರನ್ಗಳಿಗೆ ಆಲೌಟ್ ಆಗಿದೆ. ಇದಕ್ಕೆ ಪ್ರಮುಖ ಕಾರಣ ಸ್ಪಿನ್ರ್ ಅಶ್ವಿನ್.
ಮೊದಲ ಟೆಸ್ಟ್ ಪಂದ್ಯದಲ್ಲಿ ಬೌಲಿಂಗ್ನಲ್ಲಿ ಮೋಡಿ ಮಾಡಿದ್ದ ಅಶ್ವಿನ್ 9 ವಿಕೆಟ್ ಪಡೆದು ಮಿಂಚಿದ್ದರು. ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ 5 ವಿಕೆಟ್ ಪಡೆದು ಆಂಗ್ಲ ಪಡೆಯನ್ನ ಕಾಡಿದರು. ಇದೇ ಪಂದ್ಯದಲ್ಲಿ ಅಶ್ವಿನ್ ದಾಖಲೆ ನಿರ್ಮಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧ ಮೊದಲ ಇನ್ನಿಂಗ್ಸ್ ನಲ್ಲಿ ಅಶ್ವಿನ್ 5 ವಿಕೆಟ್ ಪಡೆದರು. ಸಿಬ್ಲೆ, ಲಾರೆನ್ಸ್, ಬೆನ್ ಸ್ಟೋಕ್ಸ್, ಒಲ್ಲಿ ಸ್ಟೋನ್ ಮತ್ತು ಬ್ರಾಡ್ ರ ವಿಕೆಟ್ ಪಡೆದಿದ್ದರು. ತವರು ನೆಲದಲ್ಲಿ ಆಡಿದ 45 ಪಂದ್ಯಗಳಲ್ಲಿ 23ನೇ ಬಾರಿಗೆ ಐದು ವಿಕೆಟ್ ಗಳ ಗೊಂಚಲು ಪಡೆದ ಸಾಧನೆ ಮಾಡಿದ್ದಾರೆ. ಆ ಮೂಲಕ ಇಂಗ್ಲೆಂಡ್ ನ ವೇಗಿ ಜೇಮ್ಸ್ ಆಂಡರ್ಸನ್ ಅವರ ಸಾಧನೆಯನ್ನು ಅಶ್ವಿನ್ ಹಿಂದಿಕ್ಕಿದ್ದಾರೆ. ಆ್ಯಂಡರ್ಸನ್ 89 ಟೆಸ್ಟ್ ಪಂದ್ಯಗಳಲ್ಲಿ 22 ಬಾರಿ ಐದು ವಿಕೆಟ್ ಪಡೆದಿದ್ದಾರೆ.