ಚೆನ್ನೈ: ಎಂ. ಎ ಚಿದಂಬರಂ ಸ್ಟೇಡಿಯಂ ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ. ಆರಂಭದಲ್ಲೇ ಮೊದಲ ವಿಕೆಟ್ ಪತನವಾಗಿದ್ದು, ಗಿಲ್ ಪೆವಿಲಿಯನ್ ಸೇರಿದ್ದಾರೆ.
ಚಿಪಾಕ್ ಅಂಗಳದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ ನಾಲ್ಕು ಬದಲಾವಣೆಯಾಗಿದ್ದು, ಟೀಂ ಇಂಡಿಯಾದಲ್ಲೂ ಮೂರು ಬದಲವಾಣೆ ಮಾಡಲಾಗಿದೆ. ಭಾರತದ ಪರ ಅಕ್ಷರ್ ಪಟೇಲ್ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರೆ, ಕುಲದೀಪ್ ಯಾದವ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ಮೊಹಮದ್ ಸಿರಾಜ್ ಇಂದು ಇಶಾಂತ್ ಗೆ ಸಾಥ್ ನೀಡಲಿದ್ದಾರೆ.
ಇಂದಿನ ಪಂದ್ಯದಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಚೆನ್ನೈನಲ್ಲೇ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಯಾವುದೇ ಪ್ರೇಕ್ಷಕರಿಗೆ ಅವಕಾಶ ನೀಡಿರಲಿಲ್ಲ.