ಚೆನ್ನೈ:ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಎರಡನೇ ದಿನ ರೋಚಕತೆ ಪಡೆದಿದೆ.
ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡ 329 ರನ್ಗಳಿಗೆ ಆಲೌಟ್ ಆಗಿತ್ತು. ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ ರೂಟ್ ಪಡೆಗೆ ಟೀಮ್ ಇಂಡಿಯಾ ತಿರುಗೇಟು ನೀಡಿದೆ. ಎರಡನೇ ದಿನದ ಊಟದ ವಿರಾಮದ ಹೊತ್ತಿಗೆ 18 ಓವರ್‌ಗಳಲ್ಲಿ 39 ರನ್ಗೆ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡಿರುವ ಇಂಗ್ಲೆಂಡ್ ತಂಡ ಸಂಕಷ್ಟದಲ್ಲಿದೆ.