ಅಹಮದಾಬಾದ್:ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ - ಇಂಗ್ಲೆಂಡ್ ನಡುವಿನ 4 ನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಅದ್ಭುತವಾಗಿ ಆಡಿದ ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ 365/10 ರನ್ಗಳಿಸುವ ಮೂಲಕ, 160 ರನ್‌ಗಳ ಮುನ್ನಡೆ ಸಾಧಿಸಿದೆ.
ಮೂರನೇ ದಿನದಾಟದಲ್ಲಿ ಆಕರ್ಷಕ ಬ್ಯಾಟಿಂಗ್ ಮುಂದುವರಿಸಿದ ಟೀಮ್ ಇಂಡಿಯಾದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ 96* ರನ್ ಗಳಿಸಿ ಅಜೇಯರಾಗಿ ಉಳಿದರು. ಆದರೆ ವಿಕೆಟ್‌ನ ಮತ್ತೊಂದು ತುದಿಯ ಆಟಗಾರರಿಂದ ಸೂಕ್ತ ಬೆಂಬಲ ಸಿಗದ ಕಾರಣ ಸುಂದರ್ ಚೊಚ್ಚಲ ಶತಕ ಬಾರಿಸುವ ಅವಕಾಶದಿಂದ ವಂಚಿತರಾದರು.
ಸುಂದರ ಇನ್ನಿಂಗ್ಸ್ ಕಟ್ಟಿದ್ದ ವಾಷಿಂಗ್ಟನ್ ಸುಂದರ್ 174 ಎಸೆತಗಳಲ್ಲಿ 10 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 96 ರನ್ ಗಳಿಸಿ ಅಜೇಯರಾಗಿ ಉಳಿದರು. ಇಂಗ್ಲೆಂಡ್ ಪರ ಬೆನ್ ಸ್ಟೋಕ್ಸ್ ನಾಲ್ಕು ವಿಕೆಟ್ ಕಿತ್ತು ಮಿಂಚಿದರೆ, ಜೇಮ್ಸ್ ಆ್ಯಂಡರ್ಸನ್ ಮೂರು ಮತ್ತು ಜ್ಯಾಕ್ ಲೀಚ್ ಎರಡು ವಿಕೆಟ್ ಪಡೆದರು.