ಅಹಮದಾಬಾದ್:ದೇಶದಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಕಾರಣ ಈಗಾಗಲೇ ಕೆಲವು ನಗರಗಳಲ್ಲಿ ಲಾಕ್ಡೌನ್ ಹಾಗೂ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಇದರ ಬೆನ್ನಲ್ಲೇ ಗುಜರಾತ್ ಕ್ರಿಕೆಟ್ ಅಸೋಷಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಕೊನೆಯ ಮೂರು ಟಿ 20 ಪಂದ್ಯಗಳಿಗೆ ಟಿಕೆಟ್ ದರವನ್ನು ಮರುಪಾವತಿಸುವುದಾಗಿ ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ (ಜಿಸಿಎ) ಸೋಮವಾರ ತಿಳಿಸಿದೆ.
ಭಾರತ-ಇಂಗ್ಲೆಂಡ್ ನಡುವಿನ ಮುಂದಿನ ಮೂರು ಟಿ-20 ಪಂದ್ಯಗಳ ವೀಕ್ಷಣೆಗೆ ಕ್ರಿಕೆಟ್ ಅಭಿಮಾನಿಗಳಿಗೆ ಅವಕಾಶ ನೀಡದಿರಲು ನಿರ್ಧರಿಸಲಾಗಿದೆ. ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗುಜರಾತ್ ಕ್ರಿಕೆಟ್ ಸಂಸ್ಥೆ ತಿಳಿಸಿದೆ. ಜತೆಗೆ ಟಿಕೆಟ್ ಖರೀದಿ ಮಾಡಿರುವ ವ್ಯಕ್ತಿಗಳಿಗೆ ಹಣ ಮರುಪಾವತಿ ಮಾಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.