ಮುಂಬೈ: ಇಂಗ್ಲೆಂಡ್ ವಿರುದ್ಧ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನ ಆಯ್ಕೆ ಮಾಡಲಾಗಿದೆ. ಸೂರ್ಯಕುಮಾರ್ ಯಾದವ್, ಕೃನಾಲ್ ಪಾಂಡ್ಯ ಮತ್ತು ಕನ್ನಡಿಗ ಪ್ರಸಿದ್ಧ ಕೃಷ್ಣ ಆಯ್ಕೆಯಾಗಿದ್ದಾರೆ.
ಏಕದಿನ ಸರಣಿಯು ಮಾರ್ಚ್ 23 ರಂದು ಪ್ರಾರಂಭವಾಗಲಿದ್ದು, ಎಲ್ಲ ಪಂದ್ಯಗಳು ಪುಣೆಯಲ್ಲಿ ನಡೆಯಲಿವೆ. ಎರಡನೇ ಮತ್ತು ಮೂರನೇ ಏಕದಿನ ಪಂದ್ಯ ಮಾರ್ಚ್ 26 ಮತ್ತು 28 ರಂದು ನಡೆಯಲಿದೆ.
ಪ್ರಸ್ತುತ, ಎರಡೂ ತಂಡಗಳು ಐದು ಪಂದ್ಯಗಳ ಟಿ-20 ಸರಣಿಯನ್ನ ಆಡುತ್ತಿವೆ. ಭಾರತವು ಸರಣಿಯಲ್ಲಿ 2-2ರಿಂದ ಸಮ ಬಲ ಸಾಧಿಸಿದ, ಮುಂದಿನ ಪಂದ್ಯ ಶನಿವಾರ ನರೇಂದ್ರ ಮೋದಿ ಕ್ರಿಡಾಂಗಣದಲ್ಲಿ ನಡೆಯಲಿದೆ.
ಭಾರತದ ಏಕದಿನ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಹಲ್, ಕುಲದೀಪ್ ಯಾದವ್, ಕ್ರುನಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಸಿರಾಜ್, ಪ್ರಸಿದ್ಧ ಕೃಷ್ಣ, ಶಾರ್ದುಲ್ ಠಾಕೂರ್.
ಓದಿ : ದಿನೇಶ್ ಕಾರ್ತಿಕ್ ಆಡಿದ ಆ ಇನ್ನಿಂಗ್ಸ್ ಭಾರತೀಯನೊಬ್ಬನ ಅತ್ಯುತ್ತಮ ಇನ್ನಿಂಗ್ಸ್: ಇರ್ಫಾನ್ ಪಠಾಣ್