ಗುಜರಾತ್: ಇಲ್ಲಿನ ವಿಶ್ವ ವಿಖ್ಯಾತ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಇಂಗ್ಲೆಂಡ್ ಮತ್ತು ಭಾರತ ನಡುವಿನ ಮೂರನೇ ಟೆಸ್ಟ್ ಪ್ರಾರಂಭವಾಗಿದ್ದು, ಟಾಸ್ ಸೋತ ಟೀಂ ಇಂಡಿಯಾ ಫೀಲ್ಡಿಂಗ್ ಆರಿಸಿಕೊಂಡಿದೆ. ಇನ್ನು ಎದುರಾಳಿ ಆಂಗ್ಲರ ಬಳಗ ಬ್ಯಾಟಿಂಗ್ ಆರಿಸಿಕೊಂಡಿದೆ.
ಇಂದಿನ ಅಹರ್ನಿಶಿ ಟೆಸ್ಟ್ ಪಂದ್ಯ ಇತಿಹಾಸ ಪುಟಕ್ಕೆ ಸೇರಲಿದೆ. ಕಾರಣ ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನ ಇದಾಗಿದ್ದು, ವಿಜಯದ ಮಾಲೆ ಯಾರ ಕೊರಳಿಗೆ ಬೀಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನು ಪಿಂಕ್ ಬಾಲ್ ಟೆಸ್ಟ್ ಪಂದ್ಯ ಇದಾಗಿದ್ದರಿಂದ ಪಂದ್ಯ ಕುತೂಹಲ ತಂದಿಟ್ಟಿದೆ.
ಭಾರತ ತಂಡದಲ್ಲಿ ಕುಲ್ದೀಪ್ ಯಾದವ್ಗೆ ಬದಲಿಗೆ ವಾಷಿಂಗ್ಟನ್ ಸುಂದರ್ ಮತ್ತು ಸಿರಾಜ್ ಬದಲಿಗೆ ಜಸ್ಪ್ರೀತ್ ಬುಮ್ರಾ ಕಮ್ಬ್ಯಾಕ್ ಮಾಡಿದ್ದಾರೆ.