ಚೆನ್ನೈ:ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟ್ಸಮನ್ಗಳಿಗೆ ಮಾರಕವಾಗಿದ್ದ ಭಾರತ ತಂಡದ ಸ್ಪಿನ್ ಬೌಲರ್ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆಯೊಂದನ್ನ ಬರೆದಿದ್ದಾರೆ.
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಅಶ್ವಿನ್ ಐದು ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಬಾರಿ ಎಡಗೈ ಬ್ಯಾಟ್ಸಮನ್ ಗಳನ್ನು ಔಟ್ ಮಾಡಿದ ಸಾಧನೆ ಮಾಡಿದ್ದಾರೆ. ಅಶ್ವಿನ್ ಈ ಪಂದ್ಯದಲ್ಲಿ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದಲ್ಲಿ 200 ಬಾರಿ ಎಡಗೈ ಬ್ಯಾಟ್ಸಮನ್ ಗಳನ್ನು ಔಟ್ ಮಾಡಿದ ಮೊದಲ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಅಶ್ವಿನ್ ಇಂಗ್ಲೆಂಡ್ ನ ಸಿಬ್ಲೆ, ಲಾರೆನ್ಸ್, ಬೆನ್ ಸ್ಟೋಕ್ಸ್, ಒಲ್ಲಿ ಸ್ಟೋನ್ ಮತ್ತು ಬ್ರಾಡ್ ರ ವಿಕೆಟ್ ಪಡೆದು ಮಿಂಚಿದ್ದರು. ಈ ಪೈಕಿ ಬೆನ್ ಸ್ಟೋಕ್ಸ್ ಮತ್ತು ಸ್ಟುವರ್ಟ್ ಬ್ರಾಡ್ ಎಡಗೈ ಬ್ಯಾಟ್ಸ್ ಮನ್ ಗಳಾಗಿದ್ದಾರೆ. ಸ್ಟುವರ್ಟ್ ಬ್ರಾಡ್ ವಿಕೆಟ್ ಪಡೆಯುವ ಮೂಲಕ ಅಶ್ವಿನ್, 200 ಬಾರಿ ಎಡಗೈ ಬ್ಯಾಟ್ಸ್ ಮನ್ ಗಳನ್ನ ಪೆವಿಲಿಯನ್ಗೆ ಅಟ್ಟಿದ್ದಾರೆ.