ನವದೆಹಲಿ: ಭಾರತ ತಂಡದ ಹಿರಿಯ ವೇಗದ ಬೌಲರ್ ಮೊಹಮ್ಮದ್ ಶಮಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಮಣಿಕಟ್ಟಿಗೆ ಪೆಟ್ಟು ಬಿದ್ದು ಗಾಯಗೊಂಡಿದ್ದ, ಶಮಿ ನಾಲ್ಕನೇ ಟೆಸ್ಟ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಈಗ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಕೊಂಡಿದ್ದು, ಅಭ್ಯಾಸ ಆರಂಭಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ಮೂರು ಮತ್ತು ನಾಲ್ಕನೇ ಪಂದ್ಯಗಳಿಗೆ ಶಮಿ ಆಯ್ಕೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 19 ರಂದು ಅಡಿಲೇಡ್‌ನಲ್ಲಿ ನಡೆದ ಭಾರತದ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್ನಲ್ಲಿ ಚೆಂಡು ಶಮಿ ಮಣಿಕಟ್ಟಿಗೆ ಬಡಿದು ಗಾಯಗೊಂಡಿದ್ದರು.