ಹೈದರಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ-20 ಸರಣಿಯ ಮೂರನೇ ಪಂದ್ಯ ಇಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಎರಡು ಪಂದ್ಯಗಳಲ್ಲಿ, ಎರಡೂ ತಂಡಗಳು 1-1 ಅಂತರದ ಗೆಲುವಿನೊಂದಿಗೆ ಸರಣಿ ಸಮಬಲ ಸಾಧಿಸಿವೆ. ಮೂರನೇ ಪಂದ್ಯದಲ್ಲಿ, ಉಭಯ ತಂಡಗಳು ಸರಣಿಯಲ್ಲಿ ಮುನ್ನಡೆ ಸಾಧಿಸುವ ಉದ್ದೇಶದಿಂದ ಮೈದಾನಕ್ಕಿಳಲಿವೆ.
ಮೂರನೇ ಟಿ- 20 ಪಂದ್ಯದಲ್ಲಿ ಟೀಂ ಇಂಡಿಯಾದ ಹಿಟ್ಮ್ಯಾನ್ ರೋಹಿತ್ ಶರ್ಮಾ ಕಮ್ಬ್ಯಾಕ್ ಮಾಡುವ ಸಾಧ್ಯತೆ ಇದೆ. ರೋಹಿತ್‌ಗೆ ಮೊದಲೆರಡು ಪಂದ್ಯಗಳಿಂದ ವಿಶ್ರಾಂತಿ ನೀಡಲಾಗಿತ್ತು. ರೋಹಿತ್ ಶರ್ಮಾ ತಂಡಕ್ಕೆ ಮರಳಿದರೆ ಟೀಮ್ ಇಂಡಿಯಾ ಪರ ಯಾರು ಇನ್ನಿಂಗ್ಸ್ ಆರಂಭಿಸಬೇಕು ಎನ್ನುವುದು ದೊಡ್ಡ ತಲನೋವಾಗಿ ಪರಿಣಮಿಸಿದೆ.