ದಿ ಓವೆಲ್(ಲಂಡನ್): ಪ್ರವಾಸಿ ಭಾರತ ಹಾಗೂ ಆತಿಥೇಯ ಇಂಗ್ಲೆಂಡ್ ತಂಡಗಳ ನಡುವೆ ಮೊದಲ ಏಕದಿನ ಪಂದ್ಯ ಆರಂಭಗೊಂಡಿದೆ. ಇಂಗ್ಲೆಂಡ್ನ ದಿ ಓವೆಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ರೋಹಿತ್ ಶರ್ಮಾ ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಮೂರನೇ ಟಿ20 ಪಂದ್ಯದ ವೇಳೆ ಗಾಯಗೊಂಡಿರುವ ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಅವಕಾಶ ಪಡೆದುಕೊಂಡಿದ್ದಾರೆ.
ಟೀಂ ಇಂಡಿಯಾ: ರೋಹಿತ್ ಶರ್ಮಾ(ಕ್ಯಾಪ್ಟನ್),ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಹಲ್, ಪ್ರಸಿದ್ಧ್ ಕೃಷ್ಣ
ಇಂಗ್ಲೆಂಡ್ ತಂಡ: ಜೆಸನ್ ರಾಯ್, ಜಾನಿ ಬೈರ್ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ವಿ.ಕೀ, ಕ್ಯಾಪ್ಟನ್), ಲಿವಿಗ್ಸ್ಟೋನ್, ಮೊಯಿನ್ ಅಲಿ,ಓವರ್ಟೊನ್, ಡೆವಿಡ್ ವಿಲ್ಲಿ, ಕೆರ್ಸೆ, ಟೊಪ್ಲೆ
ಯುವ ಹಾಗೂ ಅನುಭವಿ ಆಟಗಾರರಿಂದ ರೋಹಿತ್ ಬಳಗ ಕೂಡಿದ್ದು, ಟಿ-20 ವಿಶ್ವಕಪ್ ಆರಂಭಗೊಳ್ಳುವುದಕ್ಕೂ ಮುಂಚಿತವಾಗಿ ನಡೆಯಲಿರುವ ಮತ್ತೊಂದು ಅಗ್ನಿಪರೀಕ್ಷೆ ಇದಾಗಿದೆ. ಹೀಗಾಗಿ, ಪ್ರತಿವೊಂದು ಪಂದ್ಯ ನಮಗೆ ಮಹತ್ವ ಪಡೆದುಕೊಂಡಿವೆ ಎಂದು ರೋಹಿತ್ ಶರ್ಮಾ ಹೇಳಿಕೆ ನೀಡಿದ್ದಾರೆ.
ಬಟ್ಲರ್ಗೆ ಮೊದಲ ಅಗ್ನಿಪರೀಕ್ಷೆ:ಇಂಗ್ಲೆಂಡ್ ತಂಡದ ನಾಯಕನಾಗಿದ್ದ ಇಯಾನ್ ಮಾರ್ಗನ್ ನಾಯಕತ್ವ ತೊರೆದ ಬಳಿಕ ಕ್ಯಾಪ್ಟನ್ ಆಗಿರುವ ಜಾಸ್ ಬಟ್ಲರ್ಗೆ ಇಂದು ಮೊದಲ ಏಕದಿನ ಸರಣಿಯಾಗಿದೆ. ಹೀಗಾಗಿ, ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ. ಆಂಗ್ಲರ ತಂಡದಲ್ಲಿ ಬೆನ್ ಸ್ಟೋಕ್ಸ್, ಜೋ ರೂಟ್, ಬೈರ್ಸ್ಟೋರಂತಹ ಬಲಿಷ್ಠ ಆಟಗಾರರಿದ್ದಾರೆ.
ಭಾರತ-ಇಂಗ್ಲೆಂಡ್ ಮುಖಾಮುಖಿ:ಉಭಯ ತಂಡಗಳು ಇಲ್ಲಿಯವರೆಗೆ ಒಟ್ಟು 103 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 55 ಪಂದ್ಯ ಹಾಗೂ ಇಂಗ್ಲೆಂಡ್ 43 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಉಳಿದಂತೆ ಎರಡು ಪಂದ್ಯಗಳು ಟೈ ಆಗಿದ್ದು, ಮೂರು ಮ್ಯಾಚ್ಗಳಿಂದ ಫಲಿತಾಂಶ ಬಂದಿಲ್ಲ.
ಇದನ್ನೂ ಓದಿರಿ:'IPLನಲ್ಲಿ ಮಾತ್ರ ನೀವು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ': ಭಾರತದ ಪರ ಆಡುವಾಗ ಏಕೆ? :ಸುನಿಲ್ ಗವಾಸ್ಕರ್