ನಾಟಿಂಗ್‌ಹ್ಯಾಮ್:ಇಲ್ಲಿನ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ಎರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯವನ್ನು ಭಾರತ ಗೆದ್ದಲ್ಲಿ ಕ್ಲೀನ್ ಸ್ವೀಪ್ ಮಾಡಿದಂತಾಗುತ್ತದೆ.
ತವರು ನೆಲದಲ್ಲಿ ಒಂದಾದರೂ ಪಂದ್ಯ ಗೆಲ್ಲುವ ತವಕದಲ್ಲಿ ಇಂಗ್ಲೆಂಡ್ ತಂಡ ಇದೆ. ಈ ಹಿನ್ನೆಲೆಯಲ್ಲಿ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಪಾರ್ಕಿನ್ಸನ್ ಮತ್ತು ಕರನ್ ಬದಲಾಗಿ ರೀಸ್ ಟೋಪ್ಲೆ ಮತ್ತು ಫಿಲ್ ಸಾಲ್ಟ್ ಆಡಲಿದ್ದಾರೆ.
ಭಾರತ ತಂಡದಲ್ಲಿ ನಾಲ್ಕು ಬದಲಾವಣೆ: ಭಾರತ ಈ ಬಾರಿ ನಾಲ್ಕು ಬದಲಾವಣೆ ಮಾಡಿದೆ. ಯುಜುವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಕೈಗಿಡಲಾಗಿದ್ದು, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್, ಅವೇಶ್ ಖಾನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.