ಸೌತಾಂಪ್ಟನ್:ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆದ ಕೊನೆಯ ಟಿ-20 ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡ ಭರ್ಜರಿ ಗೆಲುವು ದಾಖಲು ಮಾಡಿದೆ. ಕೊನೆ ಪಂದ್ಯದಲ್ಲಿ 89ರನ್ಗಳ ಅಂತರದ ಸೋಲು ಕಾಣುವ ಮೂಲಕ ಲಂಕಾ ಪಡೆ ಮೂರು ಟಿ-20 ಪಂದ್ಯಗಳ ಸರಣಿಯಲ್ಲಿ 3-0 ಅಂತರದಲ್ಲಿ ಸೋಲು ಕಂಡಿದೆ.
ಇಂಗ್ಲೆಂಡ್ನ ಸೌತಾಂಪ್ಟನ್ನಲ್ಲಿ ನಡೆದ ಕೊನೆಯ ಟಿ-20 ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ತಂಡ ಉತ್ತಮ ಆರಂಭ ಪಡೆದುಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ಬೈರ್ಸ್ಟೋ(51), ಡೇವಿಡ್ ಮಲನ್(76)ರನ್ಗಳಿಕೆ ಮಾಡಿ ಮೊದಲ ವಿಕೆಟ್ನಷ್ಟಕ್ಕೆ 105ರನ್ಗಳ ಜೊತೆಯಾಟವಾಡಿದರು. ಇದಾದ ಬಳಿಕ ಯಾವುಬ್ಬ ಪ್ಲೇಯರ್ಸ್ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲಗೊಂಡರೂ ತಂಡ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 180ರನ್ಗಳಿಕೆ ಮಾಡಿತು. ಲಂಕಾ ಪರ ಚಮೀರಾ 4 ವಿಕೆಟ್ ಪಡೆದುಕೊಂಡರು.