ಬ್ರಿಸ್ಟೋಲ್(ಇಂಗ್ಲೆಂಡ್):ಭಾರತ-ಇಂಗ್ಲೆಂಡ್ ಮಹಿಳಾ ತಂಡಗಳ ಮಧ್ಯೆ ಏಕೈಕ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡ ಗಳಿಕೆ ಮಾಡಿರುವ 396 ರನ್ಗಳಿಗೆ ಪ್ರತ್ಯುತ್ತರವಾಗಿ ಭಾರತ 231ರನ್ ಮಾತ್ರ ಗಳಿಸಿದೆ. ಹೀಗಾಗಿ ಫಾಲೋಆನ್ಗೊಳಗಾಗಿರುವ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಆರಂಭಿಸಿದ್ದು, ಸ್ಮೃತಿ ಮಂಧಾನ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತಕ್ಕೊಳಗಾಗಿದೆ.
ಇಂಗ್ಲೆಂಡ್ನ ಬ್ರಿಸ್ಟೋಲ್ ಮೈದಾನದಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಮಹಿಳಾ ತಂಡ 9ವಿಕೆಟ್ನಷ್ಟಕ್ಕೆ 396ರನ್ಗಳಿಕೆ ಮಾಡಿ ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಬ್ಯಾಟಿಂಗ್ ನಡೆಸಿದ ಮಿಥಾಲಿ ರಾಜ್ ನೇತೃತ್ವದ ಟೀ ಇಂಡಿಯಾ ಉತ್ತಮ ಆರಂಭ ಪಡೆದುಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಮೃತಿ ಮಂಧಾನ(78) ಹಾಗೂ ಶೆಫಾಲಿ ವರ್ಮಾ(96)ರನ್ಗಳಿಕೆ ಮಾಡಿದರು. ಆದರೆ, ಇವರ ವಿಕೆಟ್ ಪತನಗೊಳ್ಳುತ್ತಿದ್ದಂತೆ ಬೇರೆ ಯಾವುದೇ ಪ್ಲೇಯರ್ಸ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ.