ಮ್ಯಾಂಚೆಸ್ಟರ್:ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾಗಿಯಾಗಿದ್ದ ಟೀಂ ಇಂಡಿಯಾ ಕೊನೆಯ ಪಂದ್ಯ ಆಡುವುದಕ್ಕೂ ಮುಂಚಿತವಾಗಿ ಕೋವಿಡ್ ಸೋಂಕಿಗೊಳಗಾಗಿದ್ದ ಕಾರಣ ಫೈನಲ್ ಪಂದ್ಯ ರದ್ದಾಗಿತ್ತು. ಇದೀಗ ಆ ಪಂದ್ಯ ಮುಂದಿನ ವರ್ಷ ಜುಲೈ ತಿಂಗಳಲ್ಲಿ ಆಯೋಜನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
ಆಗಸ್ಟ್ - ಸೆಪ್ಟೆಂಬರ್ ತಿಂಗಳಲ್ಲಿ ಭಾರತ-ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ಆಯೋಜನೆಗೊಂಡಿತ್ತು. ನಾಲ್ಕು ಟೆಸ್ಟ್ ಪಂದ್ಯ ಮುಕ್ತಾಯಗೊಳ್ಳುತ್ತಿದ್ದಂತೆ ಐದನೇ ಪಂದ್ಯಕ್ಕಾಗಿ ಟೀಂ ಇಂಡಿಯಾ ತಯಾರಿ ನಡೆಸಿದ್ದ ವೇಳೆ ತಂಡದ ಸಹಾಯಕ ಸಿಬ್ಬಂದಿ ಯೋಗೇಶ್ ಪಾರ್ಮರ್ಗೆ ಕೊರೊನಾ ಸೋಂಕು ದೃಢಗೊಂಡಿದ್ದರಿಂದ ಫೈನಲ್ ಪಂದ್ಯ ದಿಢೀರ್ ಆಗಿ ರದ್ದುಗೊಂಡಿತ್ತು.
ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 2-1 ಅಂತರದ ಮುನ್ನಡೆ ಪಡೆದುಕೊಂಡಿದ್ದು, ಕೊನೆಯ ಪಂದ್ಯ ಮುಂದಿನ ವರ್ಷ ಜುಲೈ 2022ರಲ್ಲಿ ಆಯೋಜನೆ ಮಾಡುವುದಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿದ್ದು, ಅದಕ್ಕೆ ಬಿಸಿಸಿಐ ಕೂಡ ಸಮ್ಮಿತಿ ಸೂಚಿಸಿದೆ.