ಲೆಜೆಂಡರಿ ಕ್ರಿಕೆಟ್ ಆಟಗಾರ ಯುವರಾಜ್ ಸಿಂಗ್ 40 ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಸೇರಿ ಹಲವರು ಯುವರಾಜ್ ಸಿಂಗ್ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಯುವರಾಜ್ ಸಿಂಗ್ ಫೋಟೋವೊಂದನ್ನು ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗಿದೆ. ಬೀಚ್ ಪಕ್ಕದ ಸ್ಥಳದಲ್ಲಿ ಕುಳಿತಿರುವ ಯುವರಾಜ್ ಸಿಂಗ್ ವಿಚಿತ್ರ ಹೇರ್ಸ್ಟೈಲ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಫೋಟೋದೊಂದಿಗೆ 'ನನ್ನ ಹುಟ್ಟುಹಬ್ಬ ಇನ್ನೂ ಬಂದಿಲ್ಲ, ಕೇವಲ ನಾನು ಸೂರ್ಯಾಸ್ತವನ್ನು ಅನುಭವಿಸುತ್ತಿದ್ದೇನೆ ಅಷ್ಟೇ' ಎಂದು ಬರೆದುಕೊಂಡಿದ್ದಾರೆ. ಈಗ ಅವರಿಗೆ ಸಾಕಷ್ಟು ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯಗಳು ಹರಿದುಬಂದಿವೆ.
2011ರ ವಿಶ್ವಕಪ್‌ನಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ ಯುವರಾಜ್ ಸಿಂಗ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದನ್ನು ಇಲ್ಲಿ ಸ್ಮರಿಸಬಹುದು. ಇದಾದ ಬಳಿಕ ಮಂಕಾದ ಆಟ ಹಾಗೂ ಫೀಲ್ಡಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ವೈಫಲ್ಯ ಕಂಡುಬಂದಿದ್ದರಿಂದ ಯುವರಾಜ್ 2019ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ನೀಡುವುದಾಗಿ ದಿಢೀರ್ ಘೋಷಣೆ ಮಾಡಿದ್ದರು. ಈ ದಿಢೀರ್ ನಿರ್ಧಾರ ಹಲವು ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು.
ಇದನ್ನೂ ಓದಿ:Vijay Hazare Trophy: ಸಮರ್ಥ ಬ್ಯಾಟಿಂಗ್ ವೈಖರಿ.. ಮುಂಬೈ ವಿರುದ್ಧ ಗೆದ್ದ ಕರ್ನಾಟಕ