ನವದೆಹಲಿ: ಭಾರತ ತಂಡದ ಮಾಜಿ ವೇಗದ ಬೌಲರ್ ರುದ್ರಪ್ರತಾಪ್ ಸಿಂಗ್ ಅವರ ತಂದೆ ಶಿವಪ್ರಸಾದ್ ಸಿಂಗ್ ಬುಧವಾರ ನಿಧನರಾಗಿದ್ದಾರೆ. ಅವರು ಇತ್ತೀಚೆಗೆ ಕೋವಿಡ್-19 ಸೋಂಕಿಗೆ ತುತ್ತಾಗಿದ್ದರೆಂದು ತಿಳಿದು ಬಂದಿದೆ.
"ಇಂದು ನನ್ನ ತಂದೆ ಶಿವಪ್ರಸಾದ್ ಸಿಂಗ್ ಅವರ ನಿಧನದ ಸುದ್ದಿಯನ್ನು ಅತೀವ ದುಃಖದಿಂದ ತಿಳಿಸುತ್ತೇವೆ. ಕೋವಿಡ್-19 ವೈರಸ್ ಸೋಂಕಿನಿಂದ ಬಳಲುತ್ತಿದ್ದ ಅವರು ಮೇ 12ರಂದು ನಮ್ಮನ್ನು ಅಗಲಿದ್ದಾರೆ. ನನ್ನ ಪ್ರೀತಿಯ ತಂದೆಯ ಆತ್ಮಕ್ಕೆ ಶಾಂತಿ ಕೋರಿ ನೀವೆಲ್ಲರೂ ಪ್ರಾರ್ಥಿಸಿ ಎಂದು ನಾವು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಆರ್ಐಪಿ ಪಾಪಾ'' ಎಂದು ಆರ್.ಪಿ.ಸಿಂಗ್ ತಮ್ಮ ಟ್ವಿಟರ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.