ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ತಂದೆಯಾದ ಸಂಭ್ರಮದಲ್ಲಿದ್ದಾರೆ. ಯುವಿ ಮಡದಿ, ನಟಿ ಹಜೇಲ್ ಕೀಚ್ ಮಂಗಳವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಬಗ್ಗೆ ಯುವರಾಜ್ ಸಿಂಗ್ ಸಾಮಾಜಿಕ ಜಾಲತಾಣ ಟ್ವಿಟರ್ ಹಾಗೂ ಇನ್ಸ್ಟಾಗ್ರಾಂ ಖಾತೆಗಳಲ್ಲಿ ಸಂತಸ ಹಂಚಿಕೊಂಡಿದ್ದಾರೆ. 'ದೇವರು ನಮಗೆ ಗಂಡು ಮಗುವನ್ನು ಆಶೀರ್ವದಿಸಿದ್ದಾನೆ ಎಂದು ನಮ್ಮ ಎಲ್ಲ ಅಭಿಮಾನಿಗಳು, ಕುಟುಂಬದವರು ಮತ್ತು ಸ್ನೇಹಿತರಿಗೆ ಹಂಚಿಕೊಳ್ಳಲು ನಾವು ಉತ್ಸುಕರಾಗಿದ್ದೇವೆ' ಎಂದು ಯುವಿ ಪೋಸ್ಟ್ ಮಾಡಿದ್ದಾರೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಅಲ್ಲದೆ, 'ಈ ಆಶೀರ್ವಾದಕ್ಕಾಗಿ ನಾವು ದೇವರಿಗೆ ಧನ್ಯವಾದ ಹೇಳುತ್ತೇವೆ. ಪುಟ್ಟ ಕಂದನನ್ನು ಜಗತ್ತಿಗೆ ಸ್ವಾಗತಿಸುವ ಈ ಸಂದರ್ಭದಲ್ಲಿ ನಮ್ಮ ಗೌಪ್ಯತೆಯನ್ನು ಗೌರವಿಸಬೇಕೆಂದು ನಾವು ಬಯಸುತ್ತೇವೆ' ಎಂದು ಯುವರಾಜ್ ಪೋಸ್ಟ್ ಮೂಲಕ ಕೋರಿದ್ದಾರೆ.
ಯುವರಾಜ್ ಮತ್ತು ಹಜೇಲ್ ಕೀಚ್ ಅವರು 2016ರಂದು ನವೆಂಬರ್ 30ರಂದು ಫತೇಘರ್ ಸಾಹಿಬ್ ಗುರುದ್ವಾರದಲ್ಲಿ ಸಾಂಪ್ರದಾಯಿಕವಾಗಿ ಹಸೆಮಣೆ ಏರಿದ್ದರು. ಡಿಸೆಂಬರ್ 2, 2016ರಂದು ಗೋವಾದಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅವರು ಮತ್ತೆ ವೈವಾಹಿಕ ಪ್ರತಿಜ್ಞೆ ವಿನಿಮಯ ಮಾಡಿಕೊಂಡಿದ್ದರು.
ಇದನ್ನೂ ಓದಿ:ನನ್ನ ಕೆರಿಯರ್ ಉಳಿಸಿದ್ದು ಧೋನಿ ಭಾಯ್, ನನ್ನ ಬೆಳವಣಿಗೆಯಲ್ಲಿ ಅವರ ಪಾತ್ರ ಮಹತ್ವದ್ದು: ಹಾರ್ದಿಕ್ ಪಾಂಡ್ಯ