ಶ್ರೀನಗರ(ಜಮ್ಮು ಕಾಶ್ಮೀರ): ಉಮ್ರಾನ್ ಮಲಿಕ್ ಭಾರತ ತಂಡದಲ್ಲಿ ಸ್ಥಾನ ಪಡೆಯುತ್ತಿದ್ದಂತೆ ಅವರ ಸ್ನೇಹಿತರು, ಸಂಬಂಧಿಕರು ಮತ್ತು ನೆರೆಹೊರೆಯವರು ಸೇರಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಜೂನ್ 9ರಿಂದ ಭಾರತ-ದಕ್ಷಿಣ ಆಫ್ರಿಕಾ ತಂಡದ ನಡುವಿನ ಐದು ಟಿ-20 ಪಂದ್ಯಗಳ ಸರಣಿಗೆ ಉಮ್ರಾನ್ ಆಯ್ಕೆಯಾಗಿದ್ದಾರೆ. ಮತ್ತೊಂದೆಡೆ, ಜಮ್ಮುವಿನ ಗುಜ್ಜರ್ ನಗರ ಪ್ರದೇಶದಲ್ಲಿ ಈ ಸುದ್ದಿ ತಿಳಿಯುತ್ತಿದ್ದಂತೆ ಸಿಹಿ ಹಂಚಿ ಸಂಭ್ರಮಿಸಿದರು.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ-20 ತಂಡವನ್ನು ಭಾನುವಾರ ಪ್ರಕಟಿಸಿದೆ. ಐಪಿಎಲ್ 15ರ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ವೇಗದ ಬೌಲರ್ ಉಮ್ರಾನ್ ಮಲಿಕ್ ಹಾಗೂ ಅರ್ಷದೀಪ್ ಸಿಂಗ್ಗೆ ಅವಕಾಶ ಸಿಕ್ಕಿದೆ. ಈ ಬಾರಿ ಮಲಿಕ್ 47 ಓವರ್ಗಳಲ್ಲಿ 21 ವಿಕೆಟ್ ಪಡೆದಿದ್ದಾರೆ. ತಮ್ಮ ವೇಗದಿಂದಲೇ ಹೆಸರು ಮಾಡಿರುವ ಮಲಿಕ್ ಈಗ ಅಂತಾರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ವೇಗದ ಬೌಲಿಂಗ್:15 ನೇ ಆವೃತ್ತಿಯ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಗಂಟೆಗೆ 157 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ಮೂಲಕ ಭಾರತೀಯ ಕ್ರಿಕೆಟಿಗರು ಉಮ್ರಾನ್ಗೆ ಸ್ಥಾನ ನೀಡುವ ಬಗ್ಗೆ ಮಾತನಾಡಿದ್ದನ್ನು ಗಮನಿಸಬಹುದು. ಈ ನಡುವೆ ಪಾಕಿಸ್ತಾನಿ ಬ್ಯಾಟರ್ ಕಮ್ರಾನ್ ಅಕ್ಮಲ್ ಸಹ ಪಾಕಿಸ್ತಾನದಲ್ಲಿ ಇದ್ದಿದ್ದರೆ ಉತ್ತಮ ಸ್ಥಾನ ಸಿಗುತ್ತಿತ್ತು ಎಂದು ಹೇಳಿದ್ದರು. ಬಿಸಿಸಿಐ ಅವರನ್ನು ದಕ್ಷಿಣ ಆಫ್ರಿಕಾ ಸರಣಿಯ ತಂಡಕ್ಕೆ ಸೇರಿಸಿದೆ. ಇದರಿಂದಾಗಿ ಅವರು ಭುವನೇಶ್ವರ್ ಕುಮಾರ್ ಅವರಂತಹ ಅನುಭವಿ ವೇಗಿಗಳೊಂದಿಗೆ ಪಿಚ್ ಹಂಚಿಕೊಳ್ಳುವ ಅವಕಾಶ ಸಿಕ್ಕಿದೆ.
ವಿಶ್ವ ಕಪ್ ಮೇಲೆ ಕಣ್ಣು:ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ 16 ರಿಂದ ಐಸಿಸಿ ಟಿ20 ವಿಶ್ವಕಪ್ ಆರಂಭವಾಗಲಿದೆ. ಆಸ್ಟ್ರೇಲಿಯಾದ ಪಿಚ್ಗಳು ವೇಗಿಗಳಿಗೆ ತುಂಬಾ ಸಹಕಾರಿಯಾಗಿದ್ದು ಇದರಿಂದ ವಿಶ್ವ ಕಪ್ ಹಿನ್ನೆಲೆಯಲ್ಲೂ ಅಯ್ಕೆ ಮಾಡಿರುವ ಸಾಧ್ಯತೆ ಇದೆ. ಹಾಗೇ ಜಸ್ಪ್ರಿತ್ ಬುಮ್ರಾ ಅವರಿಗಿಂತ 155+ ವೇಗದಲ್ಲಿ ಬೌಲಿಂಗ್ ಮಾಡುವರ ಅಗತ್ಯವಿದೆ.