ಢಾಕಾ: ನ್ಯೂಜಿಲ್ಯಾಂಡ್ ಬ್ಯಾಟ್ಸ್ಮನ್ ಫಿನ್ ಅಲೆನ್ ಬಾಂಗ್ಲಾದೇಶಕ್ಕೆ ಆಗಮಿಸುತ್ತಿದ್ದಂತೆ ನಡೆಸಿದ ಕೋವಿಡ್ 19 ಪರೀಕ್ಷೆಯಲ್ಲಿ ಪಾಸಿಟಿವ್ ಪಡೆದಿದ್ದಾರೆ ಎಂದು ಅವರ ದೇಶದ ಕ್ರಿಕೆಟ್ ಮಂಡಳಿ ಮಂಗಳವಾರ ತಿಳಿಸಿದೆ.
ಅಲೆನ್ ಇತ್ತೀಚೆಗೆ ಇಂಗ್ಲೆಂಡ್ನಲ್ಲಿ ಮುಕ್ತಾಯಗೊಂಡ ದಿ ಹಂಡ್ರೆಂಡ್ ಲೀಗ್ನಲ್ಲಿ ಬರ್ಮಿಂಗ್ಹ್ಯಾಮ್ ತಂಡದ ಪರ ಆಡಿದ್ದರು. ಅವರು ಅಲ್ಲಿ ಸಂಪೂರ್ಣ ಲಸಿಕೆ ಪಡೆದುಕೊಂಡಿದ್ದಲ್ಲದೇ, ಬಾಂಗ್ಲಾದೇಶಕ್ಕೆ ಬರುವ 48 ಗಂಟೆಗಳ ಹಿಂದೆ ನಡೆಸಿದ ಎಲ್ಲ ಪರೀಕ್ಷೆಗಳಲ್ಲಿ ನೆಗೆಟಿವ್ ಪಡೆದಿದ್ದರು.
"ಕೆಲವು ಕೋವಿಡ್ ಸಾಂಕ್ರಾಮಿಕದ ಲಕ್ಷಣಗಳು ಕಂಡು ಬಂದಿರುವುದರಿಂದ ವೈದ್ಯರ ಸಲಹೆಯ ಮೇರೆಗೆ ಅವರನ್ನು ತಂಡದ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ನ್ಯೂಜಿಲ್ಯಾಂಡ್ ಕ್ರಿಕೆಟ್ ಮಂಡಳಿ ಹೇಳಿಕೆ ಬಿಡುಗಡೆ ಮಾಡಿದೆ.