ನವ ದೆಹಲಿ:ಹಾರ್ದಿಕ್ ಪಾಂಡ್ಯ ಹಾಗುಪೃಥ್ವಿ ಶಾ ಭಾರತ ಕ್ರಿಕೆಟ್ ತಂಡದ ಭವಿಷ್ಯ ನಾಯಕರು ಎಂದು ಗೌತಮ್ ಗಂಭೀರ್ ಭವಿಷ್ಯ ನುಡಿದಿದ್ದಾರೆ. ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ (ಎಫ್‌ಐಸಿಸಿಐ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
2021 ರ ಐಪಿಎಲ್‌ನಲ್ಲಿ ಪಾಂಡ್ಯ ಮುನ್ನಡೆಸಿದ ಗುಜರಾತ್ ಟೈಟಾನ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಇದಾದ ಬಳಿಕ ಐರ್ಲೆಂಡ್ ಪ್ರವಾಸದಲ್ಲೂ ಅವರ ನಾಯಕತ್ವದ ತಂಡ 2-0 ಮೂಲಕ ಸರಣಿ ಕೈವಶ ಮಾಡಿಕೊಂಡಿತ್ತು. ರೋಹಿತ್, ವಿರಾಟ್ ಕೊಹ್ಲಿ ಮತ್ತು ಕೆ ಎಲ್ ರಾಹುಲ್‌ರಂತಹ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ನ್ಯೂಜಿಲೆಂಡ್‌ನಲ್ಲಿ ನಡೆದ ಟಿ20ಯನ್ನೂ ತಂಡ ಗೆದ್ದುಕೊಂಡಿದೆ. ಹೀಗಾಗಿ, ಹಾರ್ದಿಕ್ ನಿಸ್ಸಂಶಯವಾಗಿ ಅತ್ಯುತ್ತಮ ನಾಯಕ ಎಂದು ಗಂಭೀರ್ ಕೊಂಡಾಡಿದರು.