ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಅಧ್ಯಕ್ಷ ಸೌರವ್ ಗಂಗೂಲಿ ಸೆ. 22 ರಂದು ಯುನೈಟೆಡ್ ಕಿಂಗ್‌ಡಮ್‌ಗೆ ತೆರಳಲಿದ್ದು, ಇಂಗ್ಲೆಂಡ್ ಕ್ರಿಕೆಟ್ ಪ್ರತಿನಿಧಿಗಳನ್ನು ಭೇಟಿ ಮಾಡಿ ಮಾಡಲಿದ್ದಾರೆ. ಕೊರೊನಾ ಕಾರಣದಿಂದ ಮ್ಯಾಂಚೆಸ್ಟರ್ನಲ್ಲಿ ನಡೆಯಬೇಕಿದ್ದ 5ನೇ ಟೆಸ್ಟ್ ಅನ್ನು ತಾತ್ಕಾಲಿಕ ರದ್ದುಗೊಳಿಸಲಾಗಿದ್ದು, ಅದರ ಮರು ನಿಗದಿ ಮಾಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಐಪಿಎಲ್ ಹಾಗೂ ಹಣಕ್ಕೋಸ್ಕರ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯ ರದ್ಧು : ಮೈಕಲ್ ವಾನ್ ಆರೋಪ
ಇಂಗ್ಲೆಂಡ್ ಮತ್ತು ಭಾರತ ನಡುವಿನ ಸರಣಿಯ 5ನೇ ಮತ್ತು ಅಂತಿಮ ಟೆಸ್ಟ್ ರದ್ದುಗೊಳಿಸುವುದರಿಂದ ಎರಡೂ ತಂಡ ಭಾರಿ ಮೊತ್ತದ ಹಣವನ್ನು ಕಳೆದುಕೊಳ್ಳಲಿವೆ. ಈ ಆರ್ಥಿಕ ಹೊಡೆತ ಸರಿದೂಗಿಸುವ ನಿಟ್ಟಿನಲ್ಲಿ ಸೌರವ್ ಗಂಗೂಲಿ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ)ಯ ಪ್ರತಿನಿಧಿಗಳನ್ನು ಭೇಟಿ ಮಾಡಿ ರದ್ದಾದ ಟೆಸ್ಟ್ ಅನ್ನು ಮತ್ತೆ ನಡೆಸುವ ಬಗ್ಗೆ ಮಾತುಕತೆ ನಡೆಸಲಿದ್ದಾರೆ.