ನವದೆಹಲಿ:ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಿಂಚು ಹರಿಸಿರುವ ಟೀಂ ಇಂಡಿಯಾ ಮಾಜಿ ಬ್ಯಾಟರ್, ಬಿಜೆಪಿ ಸಂಸದ ಗೌತಮ್ ಗಂಭೀರ್ ಇದೀಗ ಮತ್ತೊಮ್ಮೆ ಬ್ಯಾಟ್ ಕೈಗೆತ್ತಿಕೊಳ್ಳಲು ಸಜ್ಜಾಗಿದ್ದಾರೆ. ಲೆಜೆಂಡ್ಸ್ ಲೀಗ್ನಲ್ಲಿ ಭಾರತ ಮಹಾರಾಜಸ್ ತಂಡದ ಪರ ಆಡುವುದಾಗಿ ಘೋಷಣೆ ಮಾಡಿದ್ದಾರೆ.
ಲೆಜೆಂಡ್ಸ್ ಕ್ರಿಕೆಟ್ ಲೀಗ್ನ 2ನೇ ಆವೃತ್ತಿ ಸೆಪ್ಟೆಂಬರ್ 16ರಿಂದ ಶುರುವಾಗಲಿದೆ. ತಂಡದ ನಾಯಕತ್ವವನ್ನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವಹಿಸಿಕೊಂಡಿದ್ದು, ಇದರಲ್ಲಿ ಗಂಭೀರ್ ಭಾಗಿಯಾಗಲಿದ್ದಾರೆ. ಬಿಜೆಪಿ ಸಂಸದರಾಗಿರುವ ಗೌತಮ್ ಗಂಭೀರ್ 2022ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿ ಕೆಲಸ ಮಾಡಿದ್ದಾರೆ. ಇದರ ಬೆನ್ನಲ್ಲೇ ಇಂಡಿಯಾ ಮಹಾರಾಜಸ್ ತಂಡದ ಪರ ಆಡುವುದಾಗಿ ಘೋಷಿಸಿದ್ದಾರೆ.
ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸಮನ್ ಆಗಿ ಗೌತಮ್ ಗಂಭೀರ್ ರನ್ ಮಳೆ ಹರಿಸಿದ್ದು, ಐಪಿಎಲ್ನಲ್ಲಿ ಕೋಲ್ಕತ್ತಾ ತಂಡದ ನಾಯಕನಾಗಿ ಎರಡು ಸಲ ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ಇದೀಗ ಆರಂಭಿಕರಾಗಿ ಮತ್ತೊಮ್ಮೆ ಕಣಕ್ಕಿಳಿಯಲಿದ್ದು, ಗಂಗೂಲಿ ಅಥವಾ ವಿರೇಂದ್ರ ಸೆಹ್ವಾಗ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಸೆಪ್ಟೆಂಬರ್ 17ರಿಂದ ಶುರುವಾಗಲಿರುವ ಟೂರ್ನಿಯಲ್ಲಿ ಭಾರತ ತಂಡದ ಮಾಜಿ ದಿಗ್ಗಜ ಆಟಗಾರರು ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾಗೆ ಓಪನರ್ ಆಗಿ ಯಶಸ್ಸು ತಂದುಕೊಟ್ಟಿದ್ದ ಗಂಭೀರ್, ಇದೀಗ ಮಹಾರಾಜಾಸ್ ತಂಡದ ಬಲ ಹೆಚ್ಚಿಸಿದ್ದಾರೆ.
ಇದನ್ನೂ ಓದಿ:ಲೆಜೆಂಡ್ಸ್ ಕ್ರಿಕೆಟ್ ಲೀಗ್: ಗಂಗೂಲಿ ಭಾರತ ತಂಡದ ನಾಯಕ, ಪಂದ್ಯ ಎಲ್ಲಿ? ಯಾವಾಗ?