ಮುಂಬೈ:ಶುಭಮನ್ ಗಿಲ್ರ ಭರ್ಜರಿ ಆಟದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 171 ರನ್ಗಳ ಸವಾಲಿನ ಮೊತ್ತ ಪೇರಿಸಿದೆ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುಜರಾತ್ಗೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿತು. ಆರಂಭಿಕರಾಗಿ ಶುಭಮನ್ ಗಿಲ್ ಜೊತೆ ಬಂದ ಮ್ಯಾಥ್ಯೂ ವೇಡ್ 1 ರನ್ ಗಳಿಸುವಷ್ಟರಲ್ಲೇ ಪೆವಿಲಿಯನ್ ಸೇರಿದರು. 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದ ವಿಜಯ್ ಶಂಕರ್ (13) ಕೂಡ ಬೇಗನೇ ನಿರ್ಗಮಿಸಿದರು.
ಈ ವೇಳೆ, ಮೈದಾನಕ್ಕಿಳಿದ ನಾಯಕ ಹಾರ್ದಿಕ್ ಪಾಂಡ್ಯಾ ಶುಭಮನ್ ಗಿಲ್ ಜೊತೆಗೂಡಿ ರನ್ ಪೇರಿಸಲು ಶುರು ಮಾಡಿದರು. ಉತ್ತಮವಾಗಿ ಬ್ಯಾಟ್ ಬೀಸಿದ ಈ ಜೋಡಿ 65 ರನ್ಗಳ ಜೊತೆಯಾಟ ನೀಡಿದರು. ಉತ್ತಮವಾಗಿ ಆಡುತ್ತಿದ್ದ ಹಾರ್ದಿಕ್ ಪಾಂಡ್ಯಾ ಬಲವಾದ ಹೊಡೆತಕ್ಕೆ ಕೈ ಹಾಕಿ ಖಲೀಲ್ ಅಹ್ಮದ್ಗೆ ವಿಕೆಟ್ ಒಪ್ಪಿಸಿದರು.