ಮುಂಬೈ: ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೆಲ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದೆ. ಆದರೆ, ಈ ಹಿಂದೆ ಆಸ್ಟ್ರೇಲಿಯಾ ಪ್ರವಾಸದ ವೇಳೆ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ ಹನುಮ ವಿಹಾರಿ(Hanuma Vihari ) ಆಯ್ಕೆ ಮಾಡದಿರುವುದಕ್ಕೆ ಆಯ್ಕೆ ಸಮಿತಿ ವಿರುದ್ಧ ಇನ್ನಿಲ್ಲದ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಸಿಸಿಐ ಅವರನ್ನ ಭಾರತ ಎ(India 'A' squad)ತಂಡಕ್ಕೆ ಸೇರ್ಪಡೆ ಮಾಡಲಾಗಿದೆ.
ನವೆಂಬರ್ 23ರಿಂದ ದಕ್ಷಿಣ ಆಫ್ರಿಕಾ (South Africa tour) ವಿರುದ್ಧದ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾ ಎ ಭಾಗಿಯಾಗಲಿದೆ. ಅದಕ್ಕಾಗಿ ಈಗಾಗಲೇ ತಂಡ ಪ್ರಕಟಗೊಂಡಿದೆ. ಇದರಲ್ಲಿ ಹನುಮ ವಿಹಾರಿ ಅವಕಾಶ ಪಡೆದುಕೊಂಡಿರಲಿಲ್ಲ.
ಹೀಗಾಗಿ, ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಗೆ ಅವರಿಗೆ ಅವಕಾಶ ನೀಡಬಹುದು ಎಂಬ ಮಾತು ಕೇಳಿ ಬಂದಿತ್ತು. ಇಂದು ಪ್ರಕಟಗೊಂಡಿರುವ ತಂಡದಲ್ಲೂ ವಿಹಾರಿಗೆ ಮಣೆ ಹಾಕಿರಲಿಲ್ಲ. ಹೀಗಾಗಿ, ಅಭಿಮಾನಿಗಳು ಆಯ್ಕೆ ಸಮಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.