ಇಂಗ್ಲೆಂಡ್: ಟೀಂ ಇಂಡಿಯಾದ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಗಾಯಗೊಂಡಿದ್ದಾರೆ. ಹೀಗಾಗಿ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಅವರು ಹೊರಗುಳಿಯುವುದು ಬಹುತೇಕ ಖಚಿತ.
ಲಭ್ಯವಾಗಿರುವ ಮಾಹಿತಿ ಪ್ರಕಾರ, ಹನುಮ ವಿಹಾರಿ ಆರಂಭಿಕರಾಗಿ ಟೆಸ್ಟ್ನಲ್ಲಿ ಇನ್ನಿಂಗ್ಸ್ ಶುರು ಮಾಡ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಶುಬ್ಮನ್ ಗಿಲ್ ಸ್ಥಾನಕ್ಕೆ ಆರಂಭಿಕರಾಗಿ ಮಯಾಂಕ್ ಅಗರವಾಲ್ ಹಾಗೂ ಸ್ಟ್ಯಾಂಡ್ ಬೈ ಆಟಗಾರ ಅಭಿಮನ್ಯು ಈಶ್ವರನ್ ಇದ್ದಾರೆ. ಆದರೆ ಇವರ ಬದಲಿಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಹನುಮ ವಿಹಾರಿಗೆ ಆರಂಭಿಕ ಸ್ಥಾನ ನೀಡಲು ಕ್ಯಾಪ್ಟನ್ ಕೊಹ್ಲಿ ನಿರ್ಧರಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕೆ.ಎಲ್ ರಾಹುಲ್ಗೆ ಅವಕಾಶ ನೀಡುವ ಸಾಧ್ಯತೆಯೂ ಇದೆ.
ಇತ್ತೀಚೆಗೆ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಟೀಂ ಇಂಡಿಯಾ ಸೋಲು ಕಂಡಿದ್ದು, ರನ್ನರ್ಅಪ್ ಆಗಿ ಹೊರಹೊಮ್ಮಿತು. ಇದೀಗ ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿ ಆಗಸ್ಟ್ ತಿಂಗಳಿಂದ ಆರಂಭಗೊಳ್ಳಲಿದೆ. ಇದಕ್ಕಾಗಿ ಈಗಾಗಲೇ ಟೀಂ ಇಂಡಿಯಾ ಇಂಗ್ಲೆಂಡ್ನಲ್ಲಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ರಾಹುಲ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುತ್ತಿಲ್ಲ. ಹೀಗಾಗಿ ವಿಹಾರಿಗೆ ಸ್ಥಾನ ನೀಡಲು ತೀರ್ಮಾನಿಸಲಾಗಿದ್ದು, ರಾಹುಲ್ಗೆ ಮಧ್ಯಮ ಕ್ರಮಾಂಕದಲ್ಲಿ ಅವಕಾಶ ನೀಡಲು ಮುಂದಾಗಿದೆ.