ನವದೆಹಲಿ: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್‌ಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಹೋಮ್ ಕ್ವಾರಂಟೈನ್ ಆಗಿರುವುದಾಗಿ ಭಜ್ಜಿ ತಿಳಿಸಿದ್ದಾರೆ.
ಸೌಮ್ಯ ರೋಗಲಕ್ಷಣಗಳೊಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ನಾನು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ಅಗತ್ಯ ಇರುವ ಎಲ್ಲ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡುತ್ತೇನೆ. ದಯವಿಟ್ಟು ಸುರಕ್ಷಿತವಾಗಿರಿ ಹಾಗೂ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಹರ್ಭಜನ್ ಟ್ವೀಟ್ ಮಾಡಿದ್ದಾರೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಹರ್ಭಜನ್ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. 41 ವರ್ಷದ ಭಜ್ಜಿ 103 ಟೆಸ್ಟ್, 236 ಏಕದಿನ ಹಾಗೂ 28 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ 294 ವಿಕೆಟ್‌ಗಳನ್ನು ಪಡೆದಿದ್ದಾರೆ.