ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಭಾರತ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಶಿಖರ್ ಧವನ್ ಏಕದಿನ ಸರಣಿಗೂ ನಾಯಕತ್ವವನ್ನು ಉಳಿಸಿಕೊಳ್ಳಲಿದ್ದಾರೆ. ಎರಡೂ ಸರಣಿಗಳಲ್ಲಿ ರಿಷಬ್ ಪಂತ್ ಉಪನಾಯಕನಾಗಿದ್ದಾರೆ. ರೋಹಿತ್ ಶರ್ಮಾ, ಕೆ ಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಏಕದಿನ ಸರಣಿಗೆ ಪಾಂಡ್ಯ ಹಾರ್ದಿಕ್ ಕೂಡ ಅಲಭ್ಯ.
ಸದ್ಯ T20 ವಿಶ್ವಕಪ್ ನಡೆಯುತ್ತಿದೆ. ಇದರ ಮುಕ್ತಾಯದ ಬಳಿಕ ಭಾರತ ಈ ಸರಣಿಗಳಿಗೆ ತಂಡ ಅಣಿಯಾಗಬೇಕಿದೆ. ನ್ಯೂಜಿಲೆಂಡ್ ವಿರುದ್ಧ ಭಾರತ ಮೂರು ಟಿ20I ಮತ್ತು ಮೂರು ODIಗಳನ್ನು ಆಡಲಿದೆ. ಟಿ20 ವಿಶ್ವಕಪ್ ಫೈನಲ್ ಮುಗಿದ ಕೇವಲ ಐದು ದಿನಗಳ ಬಳಿಕ (ನವೆಂಬರ್ 18 ರಂದು) ಮೊದಲ ಟಿ20 ಪಂದ್ಯ ನಡೆಯಲಿದೆ. ಉಳಿದ ಎರಡನೇ ಟಿ20 ನವೆಂಬರ್ 20 ನಡೆಯಲಿದೆ. ಮೂರನೇ ಟಿ20 ನವೆಂಬರ್ 22 ರಂದು ನಿಗದಿಯಾಗಿದೆ. ಈ ಸರಣಿಗಳ ನಂತರ ನವೆಂಬರ್ 25, ನವೆಂಬರ್ 27 ಮತ್ತು ನವೆಂಬರ್ 30 ರಂದು ಕ್ರಮವಾಗಿ ಮೂರು ಪಂದ್ಯಗಳ ODI ಸರಣಿ ನಡೆಯಲಿದೆ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಕಳೆದ ವರ್ಷ 2021ರ ಟಿ20 ವಿಶ್ವಕಪ್ ಮುಗಿದ ಕೆಲವೇ ದಿನಗಳಲ್ಲಿ ನ್ಯೂಜಿಲೆಂಡ್ ತಂಡ ಭಾರತಕ್ಕೆ ಪ್ರವಾಸ ಬಂದಿತ್ತು. ಈ ಬಾರಿ ನಡೆಯಲಿರುವ ಎರಡೂ ಸರಣಿಯಲ್ಲಿ ಕೆಲವರಿಗೆ ವಿಶ್ರಾಂತಿ ನೀಡಿದರೆ ಇನ್ನೂ ಕೆಲವರಿಗೆ ಅವಕಾಶ ಒದಗಿಸಿ ಕೊಡಲಾಗಿದೆ. ಉಮ್ರಾನ್ ಮಲಿಕ್ ಮತ್ತೆ ಕಮ್ ಬ್ಯಾಕ್ ಮಾಡಲಿದ್ದಾರೆ.
ಟಿ20I ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್ ಮತ್ತು ಉಪನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್ , ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.
ODI ತಂಡ: ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್ ಮತ್ತು ಉಪನಾಯಕ), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ಅರ್ಶ್ದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.
ಬಾಂಗ್ಲಾದೇಶಕ್ಕೆ ಟೀಂ ಇಂಡಿಯಾ ಪ್ರವಾಸ: ಆತಿಥೇಯ ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಎರಡು ಟೆಸ್ಟ್‌ಗಳು ಮತ್ತು ಮೂರು ಏಕದಿನ ಸರಣಿಗಳಿಗೂ ಟೀಂ ಇಂಡಿಯಾ ತನ್ನ ತಂಡವನ್ನು ಪ್ರಕಟಿಸಿದೆ. ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ವಿಶ್ರಾಂತಿ ತೆಗೆದುಕೊಳ್ಳಲಿರುವ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್ ಬಾಂಗ್ಲಾ ವಿರುದ್ಧದ ಸರಣಿಗಳಿಗೆ ಅಣಿಯಾಗಲಿದ್ದಾರೆ. ಇವರ ಜೊತೆಗೆ ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಯಶ್ ದಯಾಲ್, ರವೀಂದ್ರ ಜಡೇಜಾ ಕೂಡ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ಟೆಸ್ಟ್ನಲ್ಲಿ ಕೆಎಸ್ ಭರತ್ ಎರಡನೇ ಕೀಪರ್ ಆಗಿ ಇರಲಿದ್ದಾರೆ. ಇದರ ಹೊರತಾಗಿ ಇನ್ನೂ ಕೆಲವು ಬದಲಾವಣೆಗಳೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯುವ ಸಾಧ್ಯತೆ ಇದೆ.
ಬಾಂಗ್ಲಾದೇಶ ಪ್ರವಾಸಕ್ಕೆ ಟೀಂ ಇಂಡಿಯಾದ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆ ಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಡಬ್ಲ್ಯೂ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್
ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊ. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.
ಇದನ್ನೂ ಓದಿ:ಕುಂದಾನಗರಿಯಲ್ಲಿ ಕ್ರಿಕೆಟ್ ದೇವರು.. ಬೆಳಗಾವಿ ಚಹಾ ಸವಿದ ಸಚಿನ್ ತೆಂಡೂಲ್ಕರ್: ವಿಡಿಯೋ ವೈರಲ್