ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಗುಜರಾತ್ ಟೈಟನ್ಸ್ ನಾಯಕನಾಗಿ, ಚೊಚ್ಚಲ ಪ್ರಯತ್ನದಲ್ಲೇ ತಂಡಕ್ಕೆ ಪ್ರಶಸ್ತಿ ಗೆಲ್ಲಿಸಿಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಆಲ್ರೌಂಡರ್ಗೆ ಇದೀಗ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರವಾಗಿ ಟೀಂ ಇಂಡಿಯಾ ಮಾಜಿ ಆಟಗಾರ ಹರ್ಭಜನ್ ಸಿಂಗ್ ಮಾತನಾಡಿದ್ದಾರೆ.
ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಮುಂದಿನ ದಿನಗಳಲ್ಲಿ ಭಾರತದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿ ಎಂದು ಭಜ್ಜಿ ಹೇಳಿಕೊಂಡಿದ್ದಾರೆ. ಅವರಲ್ಲಿರುವ ಉದ್ದೇಶ ಮತ್ತು ಸಕಾರಾತ್ಮಕ ನಾಯಕತ್ವದ ಗುಣಗಳು ಭವಿಷ್ಯದಲ್ಲಿ ಭಾರತ ತಂಡದ ನಾಯಕನ ಸ್ಥಾನಕ್ಕೆ ಪ್ರಬಲನಾಗಿ ಮಾಡಲಿದೆ ಎಂದಿದ್ದಾರೆ. ಹಾರ್ದಿಕ್ ಪಾಂಡ್ಯ ನಿಖರವಾದ ನಿರ್ಧಾರ, ಮೈದಾನದಲ್ಲಿ ಆಟಗಾರರ ನಿಲ್ಲಿಸುವಿಕೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ ಎಂದು ತಿಳಿಸಿದ್ದಾರೆ.
ಗಾಯದ ಸಮಸ್ಯೆ ಹಾಗೂ ಶಸ್ತ್ರಚಿಕಿತ್ಸೆಯಿಂದಾಗಿ ಟೀಂ ಇಂಡಿಯಾದಿಂದ ಹೊರಬಿದ್ದಿದ್ದ ಪಾಂಡ್ಯ, ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಹೀಗಾಗಿ, ಅವರಿಗೆ ಬಿಸಿಸಿಐ ಮಣೆ ಹಾಕಿತ್ತು. ಇಂದಿನಿಂದಲೇ ಟಿ20 ಸರಣಿ ಆರಂಭಗೊಳ್ಳಲಿದ್ದು, ಗಾಯಗೊಂಡಿರುವ ಕಾರಣ ರಾಹುಲ್ ಹೊರಬಿದ್ದಿದ್ದಾರೆ. ಹೀಗಾಗಿ ನಾಯಕತ್ವದ ಜವಾಬ್ದಾರಿ ರಿಷಭ್ ಪಂತ್ಗೆ ನೀಡಲಾಗಿದ್ದು, ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ.