ಬಾರ್ಬಡೊಸ್: ಈಗಷ್ಟೇ ಆಸ್ಟ್ರೇಲಿಯಾದಲ್ಲಿ ಆ್ಯಶಸ್ ಟೆಸ್ಟ್ ಸರಣಿಯಲ್ಲಿ 0-4ರಲ್ಲಿ ಸೋತು ಟೀಕೆಗೆ ಗುರಿಯಾಗಿರುವ ಇಂಗ್ಲೆಂಡ್, ವೆಸ್ಟ್ ಇಂಡೀಸ್ ವಿರುದ್ಧ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 9 ವಿಕೆಟ್ಗಳ ಹೀನಾಯ ಸೋಲು ಕಂಡಿದೆ.
ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ಜೇಸನ್ ಹೋಲ್ಡರ್ ಮಾರಕ ಬೌಲಿಂಗ್ ದಾಳಿಗೆ ಸಿಲುಕಿ ಕೇವಲ 103 ರನ್ಗಳಿಗೆ ಸರ್ವಪತನ ಕಂಡಿತು. ಜೇಸನ್ ರಾಯ್ 6, ಟಾಮ್ ಬಾಂಟನ್ 4, ಜೇಮ್ಸ್ ವಿನ್ಸ್ 14, ಮೊಯೀನ್ ಅಲಿ 0, ನಾಯಕ ಮಾರ್ಗನ್ 29 ಎಸೆತಗಳಿಗೆ 17, ಸ್ಯಾಮ್ ಬಿಲ್ಲಿಂಗ್ಸ್, ಡಾಸೆನ್ ತಲಾ 2 ರನ್ಗಳಿಸಿ ವಿಕೆಟ್ ಒಪ್ಪಿಸಿದರು. 49 ರನ್ಗಳಿಗೆ 7 ವಿಕೆಟ್ ಕಳೆದುಕೊಂಡಿದ್ದ ಇಂಗ್ಲೆಂಡ್ಗೆ ಕೊನೆಯಲ್ಲಿ ರಶೀದ್ 22 ಮತ್ತು ಜೋರ್ಡನ್ 28 ರನ್ಗಳಿಸಿ ತಂಡದ ಮೊತ್ತವನ್ನು 100ರ ಗಡಿ ದಾಟಿಸಿದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ