ಚೆನ್ನೈ:ಇಂಡಿಯನ್ ಪ್ರೀಮಿಯರ್ ಲೀಗ್ನ ಇಂದಿನ ಎರಡನೇ ಪಂದ್ಯದಲ್ಲಿ ಹೈದರಾಬಾದ್- ಡೆಲ್ಲಿ ಕ್ಯಾಪಿಟಲ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಿಷಭ್ ಪಂತ್ ಪಡೆ ಬ್ಯಾಟಿಂಗ್ ಆಯ್ದುಕೊಂಡಿದೆ.
ಉಭಯ ತಂಡಗಳು ಈಗಾಗಲೇ ನಾಲ್ಕು ಪಂದ್ಯಗಳನ್ನಾಡಿದ್ದು, ಡೆಲ್ಲಿ ಮೂರು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಹೈದರಾಬಾದ್ ಕೇವಲ 1 ಪಂದ್ಯದಲ್ಲಿ ಜಯ ಸಾಧಿಸಿ 7ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯಕ್ಕಾಗಿ ಡೆಲ್ಲಿ ತಂಡ ಒಂದು ಬದಲಾವಣೆ ಮಾಡಿಕೊಂಡಿದ್ದು, ಲಲಿತ್ ಸ್ಥಾನಕ್ಕೆ ಅಕ್ಸರ್ ಪಟೇಲ್ ಆಯ್ಕೆಯಾಗಿದ್ದಾರೆ. ಹಾಗೇ ಸನ್ರೈಸರ್ಸ್ ಭುವನೇಶ್ವರ್ ಕುಮಾರ್ ಬದಲಿಗೆ ಸುಚಿತ್ರಗೆ ಅವಕಾಶ ನೀಡಿದೆ. ಡೇವಿಡ್ ವಾರ್ನರ್ ನೇತೃತ್ವದ ಸನ್ರೈಸರ್ಸ್ ಹೈದರಾಬಾದ್ಗೆ ಇಂದಿನ ಪಂದ್ಯ ಗೆಲ್ಲಬೇಕಾದ ಅನಿವಾರ್ಯತೆ ಇದೆ.
ಇದನ್ನೂ ಓದಿ: ಜಡೇಜಾ ಸ್ಫೋಟಕ ಅರ್ಧಶತಕ : ಆರ್ಸಿಬಿಗೆ 192 ರನ್ಗಳ ಬೃಹತ್ ಗುರಿ ನೀಡಿದ ಸಿಎಸ್ಕೆ