ನವದೆಹಲಿ :ಭಾರತಕ್ಕೆ ಮೊದಲ ವಿಶ್ವಕಪ್ ತಂದುಕೊಟ್ಟಿದ್ದ ಕಪಿಲ್ ದೇವ್ ಅವರ ಸಾಧನೆಯನ್ನು ಐಸಿಸಿ ಸೋಮವಾರ್ ಟ್ವೀಟ್ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದೆ.
1978ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದ ಕಪಿಲ್ ದೇವ್ ಭಾರತದ ಪರ 131 ಟೆಸ್ಟ್ ಮತ್ತು 225 ಏಕದಿನ ಪಂದ್ಯವನ್ನಾಡಿದ್ದಾರೆ. ಭಾರತದಲ್ಲಿ ಕ್ರಿಕೆಟ್ ಆಟಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದ ಕಪಿಲ್ ದೇವ್, ಟೆಸ್ಟ್ನಲ್ಲಿ 434 ವಿಕೆಟ್ ಮತ್ತು 5248 ರನ್ಗಳಿಸಿದ್ದಾರೆ. 225 ಏಕದಿನ ಪಂದ್ಯಗಳಲ್ಲಿ 253 ವಿಕೆಟ್ ಮತ್ತು 3783 ರನ್ಗಳಿಸಿದ್ದಾರೆ.
ಭಾರತದಲ್ಲಿ ವೇಗದ ಬೌಲಿಂಗ್ ವಿಭಾಗದಲ್ಲಿ ಕ್ರಾಂತಿ ಎಬ್ಬಿಸಿದ್ದ ಅವರು ವಿಶ್ವ ಕಂಡಂತಹ ಸರ್ವಶ್ರೇಷ್ಠ ಆಲ್ರೌಂಡರ್ಗಳಲ್ಲಿ ಅಗ್ರಗಣ್ಯರಾಗಿದ್ದಾರೆ. 1983ರ ಏಕದಿನ ವಿಶ್ವಕಪ್ನಲ್ಲಿ ಭಾರತ ಕಪ್ ಎತ್ತಿ ಹಿಡಿಯುವಲ್ಲಿ ಇವರ ಪಾತ್ರ ಮಹತ್ವದಾಗಿತ್ತು.