ಶಾರ್ಜಾ: ಶಾರ್ಜಾ: ನಾಯಕ ಟೆಂಬ ಬವೂಮ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಮತ್ತು ಡೇವಿಡ್ ಮಿಲ್ಲರ್ ಅವರ ಕೊನೆಯ ಓವರ್ನ ಸ್ಫೋಟಕ ಆಟದ ನೆರವಿನಿಂದ ಟಿ20 ವಿಶ್ವಕಪ್ನ ಸೂಪರ್ 12 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾ ವಿರುದ್ಧ 4 ವಿಕೆಟ್ಗಳ ರೋಚಕ ಜಯ ಸಾಧಿಸಿ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ಪತುಮ್ ನಿಸಾಂಕ(72) ಅವರ ಅರ್ಧಶತಕದ ಹೊರೆತಾಗಿಯೂ ಕೇವಲ 142 ರನ್ಗಳಿಗೆ ಸರ್ವಫತನ ಗೊಂಡಿತು. ನಿಸಾಂಕ 58 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ಗಳ ನೆರವಿನಿಂದ 72 ರನ್ಗಳಿಸಿದರು. ಅಸಲಂಕಾ 21ರನ್ಗಳಿಸಿ ತಂಡದ 2ನೇ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಉಳಿದ ಯಾವ ಬ್ಯಾಟರ್ಗಳು ನಿರೀಕ್ಷಿತ ಬ್ಯಾಟಿಂಗ್ ಪದರ್ಶನ ತೋರುವಲ್ಲಿ ವಿಫಲರಾದರು.
ದಕ್ಷಿಣ ಆಫ್ರಿಕಾ ಪರ ತಬ್ರೈಜ್ ಶಮ್ಸಿ 17ಕ್ಕೆ3, ಡ್ವೇನ್ ಪ್ರಿಟೋರಿಯಸ್ 17ಕ್ಕೆ 3 ಮತ್ತು ಎನ್ರಿಚ್ ನಾರ್ಕಿಯಾ 27ಕ್ಕೆ 2 ವಕೆಟ್ ಪಡೆದು ಮಿಂಚಿದರು.
ಇನ್ನು 143 ರನ್ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 19.5 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು ತಲುಪಿತು. ನಾಯಕ ಬವೂಮ 46 ಎಸೆತಗಳಲ್ಲಿ ತಲಾ ಒಂದು ಬೌಂಡರಿ ಮತ್ತು ಸಿಕ್ಸರ್ ನೆರವಿನಿಂದ 46 ರನ್ ಸಿಡಿಸಿದರೆ, ಡೇವಿಡ್ ಮಿಲ್ಲರ್ 13 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್ಗಳ ನೆರವಿನಿಂದ ಅಜೇಯ 23 ರನ್ ಮತ್ತು ರಬಾಡ ಕೇವಲ 7 ಎಸೆತಗಳಲ್ಲಿ ಅಜೇಯ 13 ರನ್ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.