ಕರ್ನಾಟಕ

karnataka

ETV Bharat / sports

ಐಸಿಸಿ ಟಿ-20 ರ‍್ಯಾಂಕಿಂಗ್: 4ನೇ ಸ್ಥಾನಕ್ಕೇರಿದ ಕೊಹ್ಲಿ, 6ನೇ ಸ್ಥಾನದಲ್ಲಿ ರಾಹುಲ್​​ - ಡೇವಿಡ್ ಕಾನ್ವೆ

ಟಾಪ್ ಹತ್ತು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟೀಮ್​ ಇಂಡಿಯಾದ ಮತ್ತೋರ್ವ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ 6ನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಪರಿಷ್ಕೃತ ಶ್ರೇಯಾಂಕಪಟ್ಟಿಯಲ್ಲಿ ಅತ್ಯಂತ ಹೆಚ್ಚು ಗಳಿಕೆ ಕಂಡ ಆಟಗಾರ ಎಂದರೆ ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಕಂ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್.

ಐಸಿಸಿ ಟಿ-20 ರ‍್ಯಾಂಕಿಂಗ್
ಐಸಿಸಿ ಟಿ-20 ರ‍್ಯಾಂಕಿಂಗ್

By

Published : Sep 15, 2021, 4:48 PM IST

ದುಬೈ:ಟಿ-20 ವಿಶ್ವಕಪ್​​​ ಕ್ರಿಕೆಟ್‌ ಮಹಾಸಮರಕ್ಕೆ ಎಲ್ಲಾ ತಂಡಗಳು ಬರದ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಐಸಿಸಿ ಟಿ-20 ರ‍್ಯಾಂಕಿಂಗ್​ ಪಟ್ಟಿ ಬಿಡುಗಡೆಯಾಗಿದೆ.

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್‌ನ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ನಾಲ್ಕನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ತಂಡದ ಆಟಗಾರ ಡೇವಿಡ್ ಕಾನ್ವೆಯನ್ನು ಕೊಹ್ಲಿ ಹಿಂದಿಕ್ಕಿ ಈ ಸಾಧನೆ ಮಾಡಿದ್ದಾರೆ. ಕಾನ್ವೆ ನಾಲ್ಕರಿಂದ ಐದನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ಇನ್ನುಳಿದಂತೆ, ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್ ಡೇವಿಡ್ ಮಲನ್ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಪಾಕಿಸ್ತಾನ ತಂಡದ ನಾಯಕ ಬಾಬರ್​ ಅಜಂ ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಸೀಮಿತ ಓವರ್‌ಗಳ ತಂಡದ ನಾಯಕ ಆರೋನ್ ಫಿಂಚ್ ಕಾಣಿಸಿಕೊಂಡಿದ್ದಾರೆ.

ಟಾಪ್ 10 ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟೀಮ್​ ಇಂಡಿಯಾದ ಮತ್ತೋರ್ವ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ 6ನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಪರಿಷ್ಕೃತ ಶ್ರೇಯಾಂಕಪಟ್ಟಿಯಲ್ಲಿ ಅತ್ಯಂತ ಹೆಚ್ಚು ಗಳಿಕೆ ಕಂಡ ಆಟಗಾರ ಎಂದರೆ ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್. ಈ ಪಟ್ಟಿಯಲ್ಲಿಅವರು​ 8ನೇ ಸ್ಥಾನದಲ್ಲಿದ್ದಾರೆ.

ಶ್ರೀಲಂಕಾ ವಿರುದ್ಧದ ಟಿ-20 ಸರಣಿಯಲ್ಲಿ ಸೌತ್​ ಆಫ್ರಿಕಾ ತಂಡ 3-0 ಅಂತರದಿಂದ ವೈಟ್‌ವಾಶ್ ಮಾಡಿಕೊಂಡಿತ್ತು. ಈ ಸರಣಿ ಗೆಲುವಿನಲ್ಲಿ ಡಿ ಕಾಕ್ ಮಹತ್ತರ ಪಾತ್ರ ವಹಿಸಿದ್ದರು. ಈ ಪ್ರದರ್ಶನದಿಂದಾಗಿ ನಾಲ್ಕು ಸ್ಥಾನಗಳ ಏರಿಕೆ ಕಂಡಿರುವ ಡಿಕಾಕ್ 8ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ರೀಜಾ ಹೆಂಡ್ರಿಕ್ಸ್ ಹಾಗೂ ಮಕ್ರಮ್​​​ ಕೂಡ ಶ್ರೇಯಾಂಕಪಟ್ಟಿಯಲ್ಲಿ ಉತ್ತಮ ಗಳಿಕೆ ಕಂಡಿದ್ದಾರೆ. ರೀಜಾ ಹೆಂಡ್ರಿಕ್ಸ್ ಟಾಪ್ 20ಯಲ್ಲಿ ಸ್ಥಾನ ಪಡೆದರೆ, ಐಡಿನ್ ಮಾಕ್ರಮ್​​ ಈ ಶ್ರೇಯಾಂಕಪಟ್ಟಿಯಲ್ಲಿ 12 ಸ್ಥಾನಗಳ ಏರಿಕೆ ಕಂಡಿದ್ದು 11ನೇ ಸ್ಥಾನದಲ್ಲಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ ಬಾಂಗ್ಲಾದೇಶದ ಮುಸ್ತಫಿಜುರ್ ರೆಹಮಾನ್ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, 8ನೇ ಸ್ಥಾನಕ್ಕೇರಿದ್ದಾರೆ. ಇದೇ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮತ್ತೋರ್ವ ಬೌಲರ್ ನಸುಮ್ ಅಹ್ಮದ್ 25 ಸ್ಥಾನಗಳ ಏರಿಕೆ ಕಂಡಿದ್ದು 15ನೇ ಶ್ರೇಯಾಂಕದಲ್ಲಿದ್ದಾರೆ.

ಬಾಂಗ್ಲಾ ನಾಯಕ ಮಹ್ಮದುಲ್ಲಾ ನ್ಯೂಜಿಲೆಂಡ್ ವಿರುದ್ಧದ ಎರಡು ಟಿ-20 ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಕಾರಣ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಟಾಪ್​​ 10ರಲ್ಲಿ ಸ್ಥಾನ ಪಡೆದಿದ್ದಾರೆ. ಕೀವಿಸ್ ವಿರುದ್ಧದ ಸರಣಿಯ ಅಂತಿಮ ಪಂದ್ಯದಿಂದ ಹೊರಗುಳಿದಿದ್ದ ಶಕೀಬ್ ಅಲ್ ಹಸನ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಕುಸಿದಿದ್ದು ಅಫ್ಘಾನಿಸ್ತಾನದ ಆಲ್‌ರೌಂಡರ್ ಮೊಹಮ್ಮದ್ ನಬಿ ಅಗ್ರ ಸ್ಥಾನಕ್ಕೇರಿದ್ದಾರೆ.

ABOUT THE AUTHOR

...view details