ದುಬೈ: ಐಸಿಸಿ ಬುಧವಾರ ಬಿಡುಗಡೆ ಮಾಡಿರುವ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಭಾರತ ತಂಡದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮ ಶ್ರೇಯಾಂಕ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ಟ್ರೇಲಿಯಾ ಬ್ಯಾಟರ್ ಸ್ಟೀವ್ ಸ್ಮಿತ್ ಅವರು ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ರನ್ನು ಹಿಂದಿಕ್ಕೆ 3ನೇ ಸ್ಥಾನಕ್ಕೆ ಮರಳಿದ್ದಾರೆ.
4ನೇ ಆ್ಯಶಸ್ ಮತ್ತು ದಕ್ಷಿಣ ಆಫ್ರಿಕಾ ಹಾಗೂ ಭಾರತದ ನಡುವಿನ 2ನೇ ಟೆಸ್ಟ್ ಪಂದ್ಯ ಹಾಗೂ ನ್ಯೂಜಿಲ್ಯಾಂಡ್ ಮತ್ತು ಬಾಂಗ್ಲಾದೇಶಗಳ ನಡುವಿನ ಟೆಸ್ಟ್ ಸರಣಿಯ ನಂತರ ಕೆಲವು ಆಟಗಾರರ ಶ್ರೇಯಾಂಕದಲ್ಲಿ ಬದಲಾವಣೆ ಕಂಡುಬಂದಿದೆ.
ಆಸೀಸ್ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಒಂದು ಸ್ಥಾನ ಮೇಲೇರಿ 3ನೇ ಶ್ರೇಯಾಂಕ ಪಡೆದಿದ್ದಾರೆ. ಭಾರತದೆದುರು ಅಜೇಯ 96 ರನ್ ಸಿಡಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಹರಿಣಗಳ ನಾಯಕ ಡೀನ್ ಎಲ್ಗರ್(10) 4 ಸ್ಥಾನ ಏರಿಕೆ ಕಂಡು ಅಗ್ರ 10ಕ್ಕೆ ಪ್ರವೇಶಿಸಿದ್ದಾರೆ.