ದುಬೈ: ಭಾರತ ತಂಡದ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಇತ್ತೀಚೆಗೆ ಬಿಡುಗಡೆ ಮಾಡಿದ ಏಕದಿನ ರ‍್ಯಾಂಕಿಂಗ್‌ನಲ್ಲಿ ತಮ್ಮ 3ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಬೌಲರ್ ವಿಭಾಗದಲ್ಲಿ ಅನುಭವಿ ಜೂಲನ್ ಗೋಸ್ವಾಮಿ ಕೂಡ 2ನೇ ರ್ಯಾಂಕ್ನಲ್ಲಿಯೇ ಮುಂದುವರಿದಿದ್ದಾರೆ.
ಐಸಿಸಿ ಮಂಗಳವಾರ ನೂತನ ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ್ದು, ರಾಜ್ 738 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಲಿಜೆಲ್ ಲೀ(761) ಮತ್ತು ಆಸ್ಟ್ರೇಲಿಯಾದ ಅಲಿಸಾ ಹೀಲಿ(750) ಮೊದಲೆರಡು ಸ್ಥಾನಗಳಲ್ಲಿ ಮುಂದುವರಿದಿದ್ದಾರೆ. ನೂತನ ರ‍್ಯಾಂಕಿಂಗ್ ಟಾಪ್ 10ರಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.