ಮುಂಬೈ: ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಅಕ್ಟೋಬರ್ 5 ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ಮುಖಾಮುಖಿಯೊಂದಿಗೆ ಆರಂಭವಾಗಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರಕಟಿಸಿದೆ.
ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಬಹು ನಿರೀಕ್ಷಿತ ವೇಳಾಪಟ್ಟಿಯನ್ನು ಪಂದ್ಯಾವಳಿಯ ಪ್ರಾರಂಭಕ್ಕೆ ಕೇವಲ 100 ದಿನಗಳ ಮೊದಲು ಬಿಡುಗಡೆ ಮಾಡಲಾಗಿದೆ. ಟೂರ್ನಿಯು 46 ದಿನಗಳ ಕಾಲ ನಡೆಯಲಿದ್ದು, ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿ ಅಂತಿಮ ಪಂದ್ಯ ನಡೆಯಲಿದೆ.
ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ ಅಕ್ಟೋಬರ್ 15ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ವಿಶ್ವಕಪ್‌ನ ಮೊದಲ ಪಂದ್ಯವನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾದ ವಿರುದ್ಧ ಚೆನ್ನೈನಲ್ಲಿ ಆಡಲಿದೆ. ಉಳಿದಂತೆ ಭಾರತ ತಂದ ದೆಹಲಿ, ಪುಣೆ, ಧರ್ಮಶಾಲಾ, ಲಕ್ನೋ, ಮುಂಬೈ ಕೋಲ್ಕತ್ತಾ ಮತ್ತು ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಡಲಿದೆ.
ವಿಶ್ವಕಪ್ನಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದ್ದು, ಮೊದಲ ಎಂಟು ತಂಡಗಳು ಈಗಾಗಲೇ ಕ್ರಿಕೆಟ್ ವಿಶ್ವಕಪ್ ಸೂಪರ್ ಲೀಗ್ ಮೂಲಕ ಅರ್ಹತೆ ಪಡೆದಿವೆ. ಇನ್ನೆರಡು ತಂಡಗಳು ವಿಶ್ವಕಪ್ ಪಂದ್ಯಗಳನ್ನು ಆಡುವ ಅರ್ಹತೆಗಾಗಿ ಜಿಂಬಾಬ್ವೆಯಲ್ಲಿ ಪಂದ್ಯಗಳನ್ನು ಆಡುತ್ತಿವೆ. ಈ ಅರ್ಹತಾ ಪಂದ್ಯದ ಫೈನಲ್ ಜುಲೈ 9 ರಂದು ಮುಕ್ತಾಯಗೊಳ್ಳಲಿದೆ. ಇದರಲ್ಲಿ ಗೆದ್ದ ಮತ್ತು ರನ್ನರ್ ಅಪ್ ಆದ ತಂಡ ವಿಶ್ವಕಪ್ ಪಂದ್ಯಗಳನ್ನು ಆಡಲಿದೆ. ಪ್ರತಿ ತಂಡವು ಇತರ ಒಂಬತ್ತು ತಂಡಗಳನ್ನು ರೌಂಡ್ ರಾಬಿನ್ ಮಾದರಿಯಲ್ಲಿ ಎದುರಿಸಲಿವೆ ಮತ್ತು ಅಗ್ರ ನಾಲ್ಕು ತಂಡಗಳು ನಾಕೌಟ್ ಹಂತ ಮತ್ತು ಸೆಮಿ-ಫೈನಲ್‌ಗಳಿಗೆ ಅರ್ಹತೆ ಪಡೆಯುತ್ತವೆ. ನವೆಂಬರ್ 12 ರಂದು ಕೋಲ್ಕತ್ತಾದಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಗುಂಪು ಹಂತದ ಪಂದ್ಯ ನಡೆಯಲಿದೆ.
ಮೊದಲ ಸೆಮಿಫೈನಲ್ ಬುಧವಾರ ನವೆಂಬರ್ 15 ರಂದು ಮುಂಬೈನಲ್ಲಿ ನಡೆಯಲಿದೆ ಮತ್ತು ಎರಡನೇ ಸೆಮಿಫೈನಲ್ ಮರುದಿನ ಕೋಲ್ಕತ್ತಾದಲ್ಲಿ ನಡೆಯಲಿದೆ. ಎರಡೂ ಸೆಮಿಫೈನಲ್‌ಗಳು ಮೀಸಲು ದಿನವನ್ನು ಹೊಂದಿರುತ್ತವೆ. ನವೆಂಬರ್ 19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ನಡೆಯಲಿದೆ ಮತ್ತು ನವೆಂಬರ್ 20 ಅನ್ನು ಮೀಸಲು ದಿನವಾಗಿ ನಿಗದಿಪಡಿಸಲಾಗಿದೆ.
2023ರ ವಿಶ್ವಕಪ್‌ಗೆ ಭಾರತ ತಂಡದ ವೇಳಾಪಟ್ಟಿ:
IND vs AUS, ಅಕ್ಟೋಬರ್ 8, ಚೆನ್ನೈ
IND vs AFG, ಅಕ್ಟೋಬರ್ 11, ದೆಹಲಿ