ಪುಣೆ(ಮಹಾರಾಷ್ಟ್ರ):ವಿಶ್ವಕಪ್ 2023 ರಲ್ಲಿ ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶದ ಮಧ್ಯೆ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬೌಲಿಂಗ್ ಆಯ್ದುಕೊಂಡಿದೆ. ಆಸ್ಟ್ರೇಲಿಯಾ ತಂಡ ಈಗಾಗಲೇ ಸೆಮಿಫೈನಲ್‌ಗೆ ತನ್ನ ಸ್ಥಾನ ಕಾಯ್ದಿರಿಸಿದೆ. ಅವರಿಗೆ ಈ ಪಂದ್ಯ ಸೆಮಿಫೈನಲ್‌ಗೂ ಮುನ್ನ ಅಭ್ಯಾಸ ಪಂದ್ಯವಿದ್ದಂತೆ. ಮತ್ತೊಂದೆಡೆ, ಬಾಂಗ್ಲಾದೇಶ ತಂಡಕ್ಕೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯದ ಗೆಲುವು ತನ್ನ ಚಾಂಪಿಯನ್ಸ್ ಟ್ರೋಫಿ 2025 ಅರ್ಹತೆಗೆ ದಾರಿ ತೆರೆಯುತ್ತದೆ.
ಆಸ್ಟ್ರೇಲಿಯಾ-ಬಾಂಗ್ಲಾದೇಶ ಮಧ್ಯೆ ಬಿಗ್ ಪೈಪೋಟಿ:ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುವಂತೆ ಬಾಂಗ್ಲಾದೇಶಗೆ ಆಹ್ವಾನಿಸಿದೆ. ಈ ಮೈದಾನವನ್ನು ಸಾಮಾನ್ಯವಾಗಿ ಬ್ಯಾಟಿಂಗ್ ಸ್ನೇಹಿ ಎಂದು ಪರಿಗಣಿಸಲಾಗುತ್ತದೆ. ಇಲ್ಲಿ ಕಳೆದ ಎರಡು ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡಗಳು 330+ ಸ್ಕೋರ್‌ಗಳನ್ನು ಗಳಿಸಿವೆ. ಆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ತಂಡಗಳಿಗೆ 200ರ ಗಡಿ ಮುಟ್ಟಲು ಸಾಧ್ಯವಾಗಲಿಲ್ಲ.
ಪಾಕಿಸ್ತಾನವನ್ನು ಹೊರತುಪಡಿಸಿ, 2023 ರ ವಿಶ್ವಕಪ್‌ನ ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರ-7 ತಂಡಗಳು ಚಾಂಪಿಯನ್ಸ್ ಟ್ರೋಫಿ 2025 ರ ಅರ್ಹತೆ ಪಡೆಯುತ್ತವೆ. ಇದಕ್ಕಾಗಿ 6 ತಂಡಗಳನ್ನು ನಿರ್ಧರಿಸಲಾಗಿದ್ದು, ಉಳಿದ ಎರಡು ಸ್ಥಾನಗಳಿಗೆ ನಾಲ್ಕು ತಂಡಗಳ ನಡುವೆ ಪೈಪೋಟಿ ನಡೆದಿದೆ. ಈ ನಾಲ್ಕು ತಂಡಗಳಲ್ಲಿ ಬಾಂಗ್ಲಾದೇಶ, ಇಂಗ್ಲೆಂಡ್, ನೆದರ್ಲ್ಯಾಂಡ್ಸ್ ಮತ್ತು ಶ್ರೀಲಂಕಾ ಸೇರಿವೆ. ಈ ನಾಲ್ಕೂ ತಂಡಗಳು ಈ ಬಾರಿಯ ವಿಶ್ವಕಪ್‌ನಲ್ಲಿ ತಲಾ ಎರಡು ಪಂದ್ಯಗಳನ್ನು ಮಾತ್ರ ಗೆಲ್ಲಲು ಶಕ್ತವಾಗಿವೆ.