ನವದೆಹಲಿ: ಹಿರಿಯ ಕ್ರಿಕೆಟಿಗ ಕಪಿಲ್ ದೇವ್ ಅವರು ವಿಶ್ವಕಪ್‌ನಲ್ಲಿ ರನ್ನರ್ ಅಪ್ ಸ್ಥಾನ ಪಡೆದ ರೋಹಿತ್ ತಂಡದ ಗುಣಗಾನ ಮಾಡಿದ್ದಾರೆ. 1983ರ ವಿಶ್ವಕಪ್ ವಿಜೇತ ತಂಡದ ನಾಯಕರಾದ ಕಪಿಲ್ ದೇವ್, ಭಾರತ ತಂಡದ ಪ್ರದರ್ಶನದ ಬಗ್ಗೆ ದೇಶವೇ ಹೆಮ್ಮೆ ಪಡುತ್ತಿದೆ ಎಂದರು.
ನೀವು ಚಾಂಪಿಯನ್‌ಗಳಂತೆ ಆಡಿದ್ದೀರಿ. ಹೆಮ್ಮೆಯಿಂದ ತಲೆ ಎತ್ತಿ ನಡೆಯಿರಿ. ನಿಮ್ಮ ಮನಸ್ಸಿನಲ್ಲಿ ಟ್ರೋಫಿಯನ್ನು ಹೊರತುಪಡಿಸಿ ಬೇರಾವುದೇ ಆಲೋಚನೆ ಇರಲಿಲ್ಲ. ನೀವು ಎಂದೆಂದಿಗೂ ವಿಜೇತರೇ. ನಿಮ್ಮ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ರೋಹಿತ್, ನಿಮ್ಮ ಕೆಲಸದಲ್ಲಿ ಮಾಸ್ಟರ್ ನೀವು. ಭವಿಷ್ಯದಲ್ಲಿ ಹೆಚ್ಚಿನ ಯಶಸ್ಸು ನಿಮಗೆ ಕಾಯುತ್ತಿದೆ. ಇದು ಕಷ್ಟದ ಸಮಯ ಎಂದು ನನಗೆ ಗೊತ್ತು. ಆದರೆ ಉತ್ಸಾಹ ಕಳೆದುಕೊಳ್ಳಬೇಡಿ. ಭಾರತ ನಿಮಗೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದಾರೆ.
'ಕೆಲವೊಮ್ಮೆ ಮರೆತುಬಿಡುತ್ತಾರೆ':ಆತಿಥೇಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ವಿಶ್ವಕಪ್ ಕ್ರಿಕೆಟ್ ಫೈನಲ್‌ಗೆ ನನಗೆ ಆಹ್ವಾನ ನೀಡಿರಲಿಲ್ಲ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಭಾನುವಾರ ಹೇಳಿದ್ದರು. 1983ರಲ್ಲಿ ಮೊದಲ ಬಾರಿಗೆ ಭಾರತ ವಿಶ್ವಕಪ್ ಗೆದ್ದಾಗ ತಂಡದ ನಾಯಕರಾಗಿದ್ದ ದೇವ್, ತಾವು ಆಗಿನ ತಂಡದ ಇತರೆ ಆಟಗಾರರ ಜೊತೆಗೆ ಈ ಪಂದ್ಯ ನೋಡಲು ಬಯಸಿದ್ದಾಗಿ ತಿಳಿಸಿದ್ದರು. "ನನಗೆ ಆಹ್ವಾನ ಕೊಟ್ಟಿರಲಿಲ್ಲ. ಯಾರೂ ಕೂಡಾ ಕರೆ ಮಾಡಿಲ್ಲ. ಹೀಗಾಗಿ, ನಾನು ಹೋಗಿಲ್ಲ ಅಷ್ಟೇ. 1983ರಲ್ಲಿ ನಾನು ಗೆದ್ದ ತಂಡದ ಆಟಗಾರರೊಂದಿಗೆ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಹೋಗಬೇಕೆಂದಿದ್ದೆ. ಇದು ಬಹಳ ದೊಡ್ಡ ಕಾರ್ಯಕ್ರಮ. ಅಲ್ಲಿರುವವರೆಲ್ಲರೂ ಜವಾಬ್ದಾರಿ ನಿರ್ವಹಿಸುವಲ್ಲಿ ನಿರತರಾಗಿರುತ್ತಾರೆ. ಕೆಲವೊಮ್ಮೆ ಅವರು ಮರೆತುಬಿಡುತ್ತಾರೆ" ಎಂದು ಕಪಿಲ್ ದೇವ್ ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿದ್ದರು.
ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮಾಜಿ ಅಧ್ಯಕ್ಷರೆಂಬ ಹಿನ್ನೆಲೆಯಲ್ಲಿ ಆಹ್ವಾನಿಸಲಾಗಿತ್ತು. ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಆಹ್ವಾನಿಸುವುದು ಬಿಸಿಸಿಐನ ಸಂಪ್ರದಾಯ. ಪಂದ್ಯ ವೀಕ್ಷಣೆ ವೇಳೆ ಹಾಜರಿದ್ದ ಇತರೆ ಗಣ್ಯರಲ್ಲಿ ಶಾರೂಕ್ ಖಾನ್, ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್, ಬ್ಯಾಡ್ಮಿಂಟನ್ ದಿಗ್ಗಜ ಪ್ರಕಾಶ್ ಪಡುಕೋಣೆ ಇದ್ದರು.