ಮುಂಬೈ(ಮಹಾರಾಷ್ಟ್ರ): ಮುಂಬೈನ ವಾಂಖೆಡೆ ಮೈದಾನದಲ್ಲಿಂದು ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ತಂಡ ಸೆಣಸಾಟ ನಡೆಸುತ್ತಿವೆ. ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಅಫ್ಘಾನ್ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆಸ್ಟ್ರೇಲಿಯಾ ಬೌಲಿಂಗ್ ನಡೆಸಿದೆ.
ವಿಶ್ವಕಪ್ ಕ್ರಿಕೆಟ್ 2023ರ 39ನೇ ಪಂದ್ಯ ಇದಾಗಿದೆ. ಸೂಪರ್ ಫೋರ್ ತಲುಪಲು ಅಫ್ಘಾನಿಸ್ತಾನಕ್ಕೆ ಈ ಪಂದ್ಯದ ಗೆಲುವು ನಿರ್ಣಾಯಕವಾಗಿದೆ. ಆಸೀಸ್ ಒಂದು ವೇಳೆ ಅಫ್ಘಾನ್ ತಂಡವನ್ನು ಮಣಿಸಿದರೆ, ನೇರವಾಗಿ ಸೆಮಿಫೈನಲ್ಗೆ ತಲುಪಲಿದೆ. ಹೀಗಾಗಿ ಎರಡು ತಂಡಗಳಿಗೂ ಈ ಪಂದ್ಯ ಮಹತ್ವದ್ದಾಗಿದೆ.
ಉಭಯ ತಂಡಗಳು ಕೆಲವು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದಿವೆ. ಅಫ್ಘಾನ್ ತಂಡ ಫಜ್ಹಲಕ್ ಫಾರೂಕಿ ಬದಲಿಗೆ, ನವೀನ್ ಉಲ್ ಹಕ್ ಸ್ಥಾನ ತುಂಬಿದರೆ, ಆಸ್ಟ್ರೇಲಿಯಾ ಪ್ರಮುಖ ಎರಡು ಬದಲಾವಣೆ ಕಂಡಿವೆ. ಸ್ಟೀವ್ ಸ್ಮಿತ್ ಮತ್ತು ಕ್ಯಾಮರೂನ್ ಗ್ರೀನ್ ಬದಲಿಗೆ ಮಿಚೆಲ್ ಮಾರ್ಷ್ ಮತ್ತು ಮ್ಯಾಕ್ಸ್‌ವೆಲ್ ಆಗಮಿಸಿದ್ದಾರೆ.
ಆಸ್ಟ್ರೇಲಿಯಾ ಆಡಿರುವ 7 ಪಂದ್ಯಗಳ ಪೈಕಿ 5ರಲ್ಲಿ ಗೆಲುವು, 2 ಸೋಲು ಕಂಡರೆ, ಅಫ್ಘನ್ 7 ಪಂದ್ಯಗಳ ಪೈಕಿ 4ರಲ್ಲಿ ಗೆಲುವು, 3ರಲ್ಲಿ ಸೋಲು ಕಂಡಿದೆ. ಆಸೀಸ್ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದರೆ, ಅಫ್ಘನ್ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.