ಚೆನ್ನೈ:ಭಾರತ ತಂಡದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ನಲ್ಲಿ 3 ವಿಕೆಟ್ ಪಡೆಯುತ್ತಿದ್ದಂತೆ ದೀರ್ಘ ಮಾದರಿಯ ಕ್ರಿಕೆಟ್ನಲ್ಲಿ ಕಪಿಲ್ ದೇವ್ ಹಿಂದಿಕ್ಕಿ ಗರಿಷ್ಠ ವಿಕೆಟ್ ಪಡೆದ ಭಾರತದ 2ನೇ ಬೌಲರ್ ಎನಿಸಿಕೊಂಡಿದ್ದಾರೆ. ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ 131 ಟೆಸ್ಟ್ ಪಂದ್ಯಗಳಿಂದ 434 ವಿಕೆಟ್ ಪಡೆದಿದ್ದರು. ಭಾರತದ ಪರ ಹೆಚ್ಚು ವಿಕೆಟ್ ಪಡೆದ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ(619) ಅಗ್ರ ಸ್ಥಾನದಲ್ಲಿದ್ದಾರೆ.
ಭಾನುವಾರ ಚರಿತ್ ಅಸಲಂಕಾ ವಿಕೆಟ್ ಪಡೆಯುವ ಮೂಲಕ ಅಶ್ವಿನ್ 435ನೇ ಟೆಸ್ಟ್ ವಿಕೆಟ್ ಪಡೆದರು. ಅಶ್ವಿನ್ 85 ಟೆಸ್ಟ್ ಪಂದ್ಯಗಳಿಂದ 435 ವಿಕೆಟ್ ಪಡೆದು, ಈ ಮಾದರಿಯಲ್ಲಿ ಹೆಚ್ಚು ವಿಕೆಟ್ ಪಡೆದಿರುವ ವಿಶ್ವದ 9ನೇ ಬೌಲರ್ ಎನಿಸಿಕೊಂಡಿದ್ದಾರೆ.