ಮೊಹಾಲಿ:ಭಾರತ ಮತ್ತು ಆಸ್ಟ್ರೇಲಿಯಾ ಟಿ20 ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯಲಿದ್ದು, ಟಾಸ್ ಗೆದ್ದ ಕಾಂಗರೂ ಪಡೆ ಬೌಲಿಂಗ್ ಆಯ್ದುಕೊಂಡಿದೆ. ಮುಂದಿನ ತಿಂಗಳು ನಡೆಯುವ ಟಿ20 ವಿಶ್ವಕಪ್ಗೆ ಸಿದ್ಧತಾ ಭಾಗವಾಗಿ ನಡೆಯುತ್ತಿರುವ ಸರಣಿ, ಉಭಯ ತಂಡಗಳು ತಂಡದ ಬಲವನ್ನು ಹೆಚ್ಚಿಸಿಕೊಳ್ಳಲು ನೆರವಾಗಲಿದೆ.
ಬೂಮ್ರಾಗಿಲ್ಲ ಚಾನ್ಸ್:ಗಾಯಕ್ಕೀಡಾಗಿದ್ದ ಭಾರತದ ವೇಗಿ ಜಸ್ಪ್ರೀತ್ ಬೂಮ್ರಾ ಚೇತರಿಸಿಕೊಂಡು ಆಸ್ಟ್ರೇಲಿಯಾ ಸರಣಿಗೆ ಆಯ್ಕೆಯಾಗಿದ್ದರು. ಆದರೆ, ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಅವರು ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಬಗ್ಗೆಯೇ ಅನುಮಾನಗಳಿವೆ. ಟಾಸ್ ಬಳಿಕ ನಾಯಕ ರೋಹಿತ್ ಶರ್ಮಾ ಮಾತನಾಡಿದ್ದು, ಬೂಮ್ರಾ ಪಂದ್ಯದಲ್ಲಿ ಆಡುತ್ತಿಲ್ಲ. ಹರ್ಷಲ್ ಪಟೇಲ್ಗೆ ಸ್ಥಾನ ನೀಡಲಾಗಿದೆ. ಬೂಮ್ರಾ 2 ಅಥವಾ ಮೂರನೇ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಬೂಮ್ರಾ ಬದಲಾಗಿ ಉಮೇಶ್ ಯಾದವ್ಗೆ ಅವಕಾಶ ನೀಡಲಾಗಿದೆ. ವೇಗಿ ಉಮೇಶ್, ಮೊಹಮದ್ ಶಮಿಗೆ ಕೊರೊನಾ ಕಾಣಿಸಿಕೊಂಡ ಕಾರಣ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.