ಇಂದೋರ್(ಮಹಾರಾಷ್ಟ್ರ): ಬಾರ್ಡರ್ ಗವಾಸ್ಕರ್ ಟ್ರೋಫಿ 2023 ಟೂರ್ನಿಯ ಎರಡನೇ ಟೆಸ್ಟ್ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ಈ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯ ಮೂರನೇ ಪಂದ್ಯ ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಿಂದ ಮೂರನೇ ಟೆಸ್ಟ್ ಪಂದ್ಯ ಇಂದೋರ್ಗೆ ಶಿಪ್ಟ್ ಆಗಿದೆ.
ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಾರ್ಚ್ 1ರಿಂದ ಮೂರನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಮಹಾರಾಷ್ಟ್ರದ ವಿದರ್ಭದಲ್ಲಿ ಭಾರತ ಮೊದಲ ಪಂದ್ಯ ಜಯಸಿದೆ. ಹೋಳ್ಕರ್ ಮೈದಾನದಲ್ಲಿ ಟೀಂ ಇಂಡಿಯಾ ಮೂರೂ ಮಾದರಿಯ ಕ್ರಿಕೆಟ್ ಆಡುತ್ತಾ ಬಂದಿದೆ. ಈ ಪಂದ್ಯದ ಬಗ್ಗೆ ಅಭಿಮಾನಿಗಳಲ್ಲಿ ಕ್ರೇಸ್ ಹೆಚ್ಚಾಗಿದೆ. ಹೋಳ್ಕರ್ ಪಿಚ್‌ನಲ್ಲಿ ಭಾರತದ ಪ್ರದರ್ಶನ ಅದ್ಭುತವಾಗಿದೆ. ಈ ಮೈದಾನದಲ್ಲಿ ಭಾರತ ತಂಡ ಇದುವರೆಗೆ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಸೋತಿಲ್ಲ.
ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ 2022 ಅಕ್ಟೋಬರ್ನಲ್ಲಿ ಮೊದಲ ಟಿ20 ಪಂದ್ಯವನ್ನು ಆಡಲಾಯಿತು. ನಂತರ ODI ಕ್ರಿಕೆಟ್ ಅನ್ನು ಜನವರಿ 2023 ರಲ್ಲಿ ಏಕದಿನ ಪಂದ್ಯವನ್ನು ಆಯೋಜಿಸಲಾಗಿತ್ತು. ಇದುವರೆಗೆ ಹೋಳ್ಕರ್ ಮೈದಾನದಲ್ಲಿ ಟೆಸ್ಟ್ ಮಾದರಿಯ ಎರಡು ಪಂದ್ಯ ಆಯೋಜನೆ ಆಗಿದ್ದು, ಎರಡರಲ್ಲೂ ಭಾರತ ಜಯಿಸಿದೆ.
2016ರಲ್ಲಿ ಅಕ್ಟೋಬರ್ 8 ರಿಂದ 11ರವರೆಗೆ ನ್ಯೂಜಿಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಸಹಿತ 86 ರನ್ಗಳಿಂದ ಜಯಿಸಿತ್ತು. ನವೆಂಬರ್ 2019 ರಲ್ಲಿ, ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡು ಟೆಸ್ಟ್ ಸರಣಿಯನ್ನು ಆಯೋಜಿಸಲಾಗಿದ್ದು ಇದರಲ್ಲಿ, ಬಾಂಗ್ಲಾದೇಶದ ವಿರುದ್ಧ 130 ರನ್‌ಗಳ ಗೆಲುವು ಸಾಧಿಸಿತ್ತು.