ನವದೆಹಲಿ:ನಾಳೆಯಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ನಾಯಕರಾಗಿ ತಂಡವನ್ನು ಮನ್ನಡೆಸಲಿದ್ದಾರೆ. ರೋಹಿತ್ ಶರ್ಮಾ ಈ ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ. ಜೊತೆಗೆ ಬೆನ್ನು ನೋವಿನ ಕಾರಣ ಶ್ರೇಯಸ್ ಅಯ್ಯರ್ ಕೂಡ ಸರಣಿಯಿಂದ ಹೊರಗುಳಿದಿದ್ದಾರೆ. ಮದುವೆ ಬಳಿಕ ಶಾರ್ದೂಲ್ ಠಾಕೂರ್ ಭಾರತ ತಂಡಕ್ಕೆ ಮರಳಿದ್ದಾರೆ.
ಭಾರತ ತಂಡ ಭರ್ಜರಿ ಕಸರತ್ತು:ಭಾರತ- ಆಸ್ಟ್ರೇಲಿಯಾ ನಡುವಿನ ಮೂರು ಏಕದಿನ ಪಂದ್ಯಗಳ ಸರಣಿಯು ಮಾರ್ಚ್ 17ರಿಂದ ಆರಂಭವಾಗಲಿದೆ. ಶುಕ್ರವಾರ ವಾಂಖೆಡೆಯಲ್ಲಿ ಮೊದಲ ಏಕದಿನ ಪಂದ್ಯ ಜರುಗಲಿದೆ. ಆಸ್ಟ್ರೇಲಿಯಾ ವಿರುದ್ಧ ಗೆಲುವು ದಾಖಲಿಸಲು ಭಾರತ ತಂಡ ಭರ್ಜರಿ ಕಸರತ್ತು ನಡೆಸುತ್ತಿದೆ.
ಭಾರತ-ಆಸ್ಟ್ರೇಲಿಯಾ ನಡುವೆ 143 ಓಡಿಐ ಪಂದ್ಯಗಳು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 143 ಏಕದಿನ ಪಂದ್ಯಗಳು ನಡೆದಿವೆ. ಈ ಪಂದ್ಯಗಳಲ್ಲಿ ಕಾಂಗರೂಗಳು ಪ್ರಾಬಲ್ಯ ಮೆರೆದಿದ್ದಾರೆ. ಆಸ್ಟ್ರೇಲಿಯಾ 80 ಪಂದ್ಯಗಳನ್ನು ಗೆದ್ದಿದ್ದರೆ, ಭಾರತ 53 ಪಂದ್ಯಗಳನ್ನು ಗೆದ್ದಿದೆ. 10 ಪಂದ್ಯಗಳು ಅಪೂರ್ಣವಾಗಿವೆ.
ಆಸ್ಟ್ರೇಲಿಯಾ ಕ್ರಿಕೆಟ್ ಜಗತ್ತಿನ ಬಲಿಷ್ಠ ತಂಡವಾಗಿದೆ. ಕಾಂಗರೂಗಳು 12 ಓಡಿಐ ವಿಶ್ವಕಪ್‌ಗಳಲ್ಲಿ 5 ಅನ್ನು ಗೆದ್ದಿದ್ದಾರೆ (1987, 1999, 2003, 2007, 2015). ಅದೇ ಸಮಯದಲ್ಲಿ, ಟೀಂ ಇಂಡಿಯಾ ಎರಡು ವಿಶ್ವಕಪ್‌ಗಳನ್ನು ಗೆದ್ದಿದೆ (1983, 2011).
ಇದನ್ನೂ ಓದಿ:ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಶ್ರೇಯಸ್ ಅಯ್ಯರ್ ಔಟ್: ಐಪಿಎಲ್ನಿಂದಲೂ ಹೊರಗುಳಿಯುವ ಸಾಧ್ಯತೆ