ಹೈದರಾಬಾದ್:ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದ ಟಿಕೆಟ್ಗಳ ಖರೀದಿಗಾಗಿ ನೂಕುನುಗ್ಗಲು ಮತ್ತು ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಕ್ರಿಕೆಟ್ ಸಂಸ್ಥೆಯ (ಹೆಚ್ಸಿಎ) ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ಟಿಕೆಟ್ ಮಾರಾಟ ಮಾಡುವ ಪ್ರಕ್ರಿಯೆಗೆ ಕಿಡಿಕಾರಿರುವ ಕ್ರೀಡಾಭಿಮಾನಿಗಳು ಈ ಗಲಾಟೆಗೆ ಹೆಚ್ಸಿಎ ನೇರ ಕಾರಣ ಎಂದು ಆರೋಪ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಮೊಹಮ್ಮದ್ ಅಜರುದ್ದೀನ್ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಹ ನೀಡಲಾಗಿದೆ. ಟಿಕೆಟ್ ವಿಚಾರದಲ್ಲಿ ನಿರ್ಲಕ್ಷ್ಯ ಮತ್ತು ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಈ ಸುದ್ದಿ ಕ್ರೀಡಾಭಿಮಾನಿಗಳಲ್ಲಿ ಕಿಚ್ಚು ಹೊತ್ತಿಸಿದ್ದು ಅಜರುದ್ದೀನ್ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ.
ಈ ದುರ್ಘಟನೆಗೆ ಅಜರುದ್ದೀನ್ ನೇರ ಹೊಣೆಗಾರರು. ಹಾಗಾಗಿ ಈ ಕೂಡಲೇ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅಲ್ಲದೇ ಅವರನ್ನು ಹುದ್ದೆಯಿಂದ ತತಕ್ಷಣ ವಜಾಗೊಳಿಸಬೇಕು ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಥಗೆ ಕ್ರೀಡಾಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ.