ನ್ಯಾಟಿಂಗ್ಹ್ಯಾಮ್:ಪ್ರವಾಸಿ ಭಾರತ ಹಾಗೂ ಆತಿಥೇಯ ಇಂಗ್ಲೆಂಡ್ ನಡುವೆ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಮೊದಲ ಇನ್ನಿಂಗ್ಸ್ನಲ್ಲಿ ಆಂಗ್ಲರ ಪಡೆ 95ರನ್ಗಳ ಹಿನ್ನಡೆ ಅನುಭವಿಸಿದೆ. ಇದರ ಮಧ್ಯೆ ವೇಗದ ಬೌಲರ್ ಜೆಮ್ಸ್ ಆ್ಯಂಡರ್ಸನ್(James Anderson) ಹೊಸ ದಾಖಲೆ ನಿರ್ಮಿಸಿದ್ದು, ಕನ್ನಡಿಗ ಅನಿಲ್ ಕುಂಬ್ಳೆ ಹೆಸರಿನಲ್ಲಿದ್ದ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ.
ಮೊದಲ ಇನ್ನಿಂಗ್ಸ್ನಲ್ಲಿ ಚೇತೇಶ್ವರ್ ಪೂಜಾರಾ ಹಾಗೂ ವಿರಾಟ್ ಕೊಹ್ಲಿ ವಿಕೆಟ್ ಪಡೆದುಕೊಂಡು ಟೀಂ ಇಂಡಿಯಾ ಮಾಜಿ ಆಟಗಾರ ಅನಿಲ್ ಕುಂಬ್ಳೆ ದಾಖಲೆ ಸರಿಗಟ್ಟಿದ್ದ 39 ವರ್ಷದ ಆ್ಯಂಡರ್ಸನ್ ಇದೀಗ ಕನ್ನಡಿಗನಾದ ಕೆ.ಎಲ್. ರಾಹುಲ್ ವಿಕೆಟ್ ಪಡೆದುಕೊಳ್ಳುವ ಮೂಲಕ ಅವರ ದಾಖಲೆ ಬ್ರೇಕ್ ಮಾಡಿದ್ದಾರೆ.
ನ್ಯಾಟಿಂಗ್ಹ್ಯಾಮ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ನಾಲ್ಕು ವಿಕೆಟ್ ಪಡೆದುಕೊಂಡು ಮಿಂಚಿರುವ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್ನಲ್ಲಿ ಗರಿಷ್ಠ ವಿಕೆಟ್ ಪಡೆದ ಪಟ್ಟಿಯಲ್ಲಿ ಕನ್ನಡಿಗ ಹಾಗೂ ಭಾರತದ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ದಾಖಲೆ ಮುರಿದಿದ್ದಾರೆ.