ಪಾರ್ಲ್(ದಕ್ಷಿಣ ಆಫ್ರಿಕಾ): ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್ಗಳಲ್ಲಿ 6 ವಿಕೆಟ್ನಷ್ಟಕ್ಕೆ 287ರನ್ಗಳಿಕೆ ಮಾಡಿದ್ದು, ಎದುರಾಳಿ ತಂಡದ ಗೆಲುವಿಗೆ 288ರನ್ಗಳ ಗುರಿ ಫಿಕ್ಸ್ ಮಾಡಿದೆ.
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಲು ಕಣಕ್ಕಿಳಿದ ರಾಹುಲ್ ಪಡೆ ಉತ್ತಮ ಆರಂಭ ಪಡೆದುಕೊಂಡಿತು. ಮೊದಲ ವಿಕೆಟ್ನಷ್ಟಕ್ಕೆ ಆರಂಭಿಕ ಶಿಖರ್-ರಾಹುಲ್ ಜೋಡಿ 63ರನ್ಗಳ ಜೊತೆಯಾಟವಾಡಿತು. 29ರನ್ಗಳಿಕೆ ಮಾಡಿದ್ದ ವೇಳೆ ಧವನ್ ಮಗಲಾ ಓವರ್ನಲ್ಲಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಟೀಂ ಇಂಡಿಯಾ ಜೊತೆಯಾಟಕ್ಕೆ ಬ್ರೇಕ್ ಬಿದ್ದಿತ್ತು.
ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ವೈಫಲ್ಯ, ಕೊಹ್ಲಿ ಶೂನ್ಯಕ್ಕೆ ಔಟ್
ಎರಡನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲು ಕಣಕ್ಕಿಳಿದ ವಿರಾಟ್ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಕ್ಯಾಪ್ಟನ್ ರಾಹುಲ್ ವಿಕೆಟ್ ಪತನಗೊಳ್ಳುತ್ತಿದ್ದಂತೆ ಮೈದಾನಕ್ಕೆ ಬಂದ ಶ್ರೇಯಸ್ ಅಯ್ಯರ್ 11ರನ್ಗಳಿಕೆ ಮಾಡಿ ವಿಕೆಟ್ ಒಪ್ಪಿಸಿದರು.
ರಾಹುಲ್-ಪಂತ್ ಅರ್ಧಶತಕದ ಬ್ಯಾಟಿಂಗ್